ದೇಹ ತುಂಡಾಗಿ ಕತ್ತರಿಸಿ ಮಹಿಳೆಯ ಹತ್ಯೆ

ದೇಹ ತುಂಡಾಗಿ ಕತ್ತರಿಸಿ ಮಹಿಳೆಯ  ಹತ್ಯೆ

ಫ್ರಿಡ್ಜ್ ನಲ್ಲಿ ಮೃತದೇಹ ಬಚ್ಚಿಟ್ಟು ಆರೋಪಿ ಪರಾರಿ

ದೇಹ ತುಂಡಾಗಿ ಕತ್ತರಿಸಿ ಮಹಿಳೆಯ ಹತ್ಯೆ 

ಬೆಂಗಳೂರು : ನಗರದ ಮಲ್ಲೇಶ್ವರದ ಪೈಪ್‌ಲೈನ್‌ನ ಕೆ.ವಿ.ರಸ್ತೆಯ ಬಾಡಿಗೆ ಮನೆಯಲ್ಲಿ ನೆಲಸಿದ್ದ ಮಹಿಳೆಯೊಬ್ಬರನ್ನು 30ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ, ಅವರ ಮೃತದೇಹವನ್ನು ಫ್ರಿಡ್ಜ್‌ನಲ್ಲಿ ಬಚ್ಚಿಟ್ಟಿದ್ದ ಪ್ರಕರಣ ತಡವಾಗಿ ಪತ್ತೆಯಾಗಿದೆ. ಮಹಾಲಕ್ಷ್ಮಿ(29) ಕೊಲೆಯಾದವರು. ಪ್ರಕರಣ ದಾಖಲಿಸಿಕೊಂಡಿರುವ ವೈಯಾಲಿಕಾವಲ್‌ ಠಾಣೆ ಪೊಲೀಸರು, ಪರಾರಿಯಾಗಿರುವ ಆರೋಪಿ ಪತ್ತೆಗೆ ಶೋಧ ಆರಂಭಿಸಿದ್ದಾರೆ.

ಕೃತ್ಯದ ನಡೆದ ಸ್ಥಳಕ್ಕೆ ಬೆರಳಚ್ಚು, ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಜ್ಞರು, ಶ್ವಾನದಳ ಹಾಗೂ ವೈದ್ಯಾಧಿಕಾರಿ ಬಿ ಗಳು ಭೇಟಿ ನೀಡಿ ಪರಿಶೀಲಿಸಿದರು. ದೆಹಲಿಯಲ್ಲಿ ನಡೆದಿದ್ದ ಶ್ರದ್ದಾ ವಾಕರ್ ಕೊಲೆ ಪ್ರಕರಣದ ಮಾದರಿಯಲ್ಲೇ ಈ ಕೊಲೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಕೊಲೆಯಿಂದ ಅಕ್ಕಪಕ್ಕದ ನಿವಾಸಿಗಳು ಆತಂಕಗೊಂಡಿದ್ದಾರೆ.

'ಕೃತ್ಯ ನಡೆದ ಅಕ್ಕ ಪಕ್ಕದ ರಸ್ತೆಯಲ್ಲಿ ಅಳವಡಿಸಿದ್ದ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಲಾಗಿದೆ. ಕೊಲೆಯಾದ ಮಹಿಳೆಯ ಮೊಬೈಲ್ ಫೋನ್ ಜಪ್ತಿ ಮಾಡಲಾಗಿದೆ. ಆಕೆ ಯಾರಿಗೆಲ್ಲ ಕರೆ ಮಾಡಿದ್ದರು ಎಂಬು ದನ್ನೂ ಪರಿಶೀಲಿಸಲಾಗುತ್ತಿದೆ. ಸುಳಿವು ಸಿಕ್ಕಿದ್ದು ಆರೋಪಿಯನ್ನು ಶೀಘ್ರದಲ್ಲೇ ಬಂಧಿಸ ಲಾಗುವುದು' ಎಂದು ಪೊಲೀಸರು ಹೇಳಿದರು.

ಯುವಕನ ಹುಡುಕಾಟದಲ್ಲಿ ಪೊಲೀಸರು 

ಮಹಾಲಕ್ಷ್ಮಿ ಕೆಲಸ ಮಾಡುತ್ತಿದ್ದ ಕಂಪನಿಗೆ ದಿನನಿತ್ಯ ಕರೆದುಕೊಂಡು ಹೋಗಿ ಮರಳಿ ಮನೆಗೆ ತಂದು ಬಿಡುತ್ತಿದ್ದ ಯುವಕ ಆತನೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸುತ್ತಾರೆ.

ಆತನ ಮೊಬೈಲ್ ಪತ್ತೆಯಾಗಿದ್ದು ಯುವಕ ತೆಲೆ ಮೆಡಿಸಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿದು ಬಂದಿದೆ .

“ಆರೋಪಿ ಪತ್ತೆಗೆ ವೈಯಾಲಿಕಾವಲ್‌, ಶೇಷಾದ್ರಿಪುರ ಹಾಗೂ ಹೈಗೌಂಡ್ಸ್ ಪೊಲೀಸರು ತನಿಖೆ ಆರಂಭಿಸಿದ್ದು, ಒಟ್ಟು ಎಂಟು ತಂಡ ರಚಿಸಿದ್ದಾರೆ. ಅನುಮಾನಿತ ವ್ಯಕ್ತಿಗಳ ಬಗ್ಗೆ ಮಾಹಿತಿ ಸಂಗ್ರ- ಹಿಸುತ್ತಿರುವ ಪೊಲೀಸರು, ಕುಟುಂಬಸ್ಥರ ಬಳಿಯೂ ಮಾಹಿತಿ ಕಲೆ ಹಾಕಿದ್ದಾರೆ. ಮಹಾಲಕ್ಷ್ಮಿ ಜತೆಗೆ ಸಂಪರ್ಕದಲ್ಲಿದ್ದ ಎಲ್ಲ ವ್ಯಕ್ತಿ- ಗಳನ್ನು ವಿಚಾರಣೆ ನಡೆಸಿದ್ದಾರೆ' ಎಂದು ಮೂಲಗಳು ಹೇಳಿವೆ

ಫೋಟೋ ಕೃಪೆ: ಪ್ರಜಾವಾಣಿ