ಪುರುಷೋತ್ತಮ ಹಂದ್ಯಾಳ

ಬಳ್ಳಾರಿ ತಾಲೂಕಿನ ಹಂದ್ಯಾಳ ಗ್ರಾಮದ ಅಪ್ಪಟ ಗ್ರಾಮೀಣ ಪ್ರತಿಭೆ, ವೃತ್ತಿಯಲ್ಲಿ ಪತ್ರಿಕಾ ಛಾಯಾಗ್ರಾಹಕರಾದ ಇವರು ತಮ್ಮ ಶಾಲಾದಿನಗಳಲ್ಲಿಯೇ ರಂಗಭೂಮಿಗೆ ಪ್ರವೇಶಿಸಿದರು. ಕುರುಕ್ಷೇತ್ರ, ಧನಿಕರ ದೌರ್ಜನ್ಯ, ಕರ್ತವ್ಯದ ಕಾಣಿಕೆ, ಮಹಿಮಾಪುರ, ಕುಂಕುಮ ತಂದ ಕೈಲಾಸ ಮುಂತಾದ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ರಕ್ತರಾತ್ರಿ ನಾಟಕದಲ್ಲಿಯ ಶಕುನಿ ಪಾತ್ರದಲ್ಲಿಯ ಇವರ ವಿಶಿಷ್ಟ ಅಭಿನಯಕ್ಕೆ "ಅಭಿನವ ಶಕುನಿ" ಎಂದೇ ಪ್ರಸಿದ್ಧಿ ಪಡೆದಿದ್ದಾರೆ.
ಶಕುನಿಯ ಇವರ ಅಭಿನಯವನ್ನು ನಾಡೋಜ ಬೆಳಗಲಿ ವೀರಣ್ಣನವರು ಹಾಗೂ ನಾಡೋಜ ಸುಭದ್ರಮ್ಮ ಮನ್ಸೂರ್‌ರವರು ಮುಕ್ತ ಕಂಠದಿಂದ ಹೊಗಳಿದ್ದಾರೆ.ಬಳ್ಳಾರಿಯ ಕಾರಾಗೃಹದ ಖೈದಿಗಳ ಮನಃಪರಿವರ್ತನೆಗಾಗಿ ಖೈದಿಗಳಿಗಾಗಿ ನಾಟಕ ನಿರ್ದೇಶನವನ್ನು ಮಾಡಿರುವರು. ಕರೋನದ ಸಂಕಷ್ಟದ ಕಾಲದಲ್ಲಿ ಜನಜಾಗೃತಿಗಾಗಿ ಕಿರುಚಿತ್ರ ನಿರ್ಮಿಸಿ ಅಭಿನಯಿಸಿದ್ದಾರೆ. ಕನ್ನಡದ ನಾಲ್ಕು ಧಾರಾವಾಹಿಗಳಲ್ಲೂ ಪುರುಷೋತ್ತಮರವರು ಅಭಿನಯಿಸಿದ್ದಾರೆ. ಮೂವತ್ತುಮೂರು ವರ್ಷಗಳಿಂದ ರಂಗಭೂಮಿಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.