ಅಖಿಲ ಕರ್ನಾಟಕ ಹೇಮರೆಡ್ಡಿ ಮಲ್ಲಮ್ಮ ಮಹಿಳಾ ಅಭಿವೃದ್ಧಿ ಸಂಸ್ಥೆಯ 7ನೇ ವರ್ಷದ ವಾರ್ಷಿಕ ಮಹಾಸಭೆ

ಅಖಿಲ ಕರ್ನಾಟಕ ಹೇಮರೆಡ್ಡಿ ಮಲ್ಲಮ್ಮ ಮಹಿಳಾ ಅಭಿವೃದ್ಧಿ ಸಂಸ್ಥೆಯ 7ನೇ ವರ್ಷದ ವಾರ್ಷಿಕ ಮಹಾಸಭೆ

ಅಖಿಲ ಕರ್ನಾಟಕ ಹೇಮರೆಡ್ಡಿ ಮಲ್ಲಮ್ಮ ಮಹಿಳಾ ಅಭಿವೃದ್ಧಿ ಸಂಸ್ಥೆಯ 7ನೇ ವರ್ಷದ ವಾರ್ಷಿಕ ಮಹಾಸಭೆ

ಕಲಬುರಗಿ: ನಗರದ ಬಸವ ಭವನದಲ್ಲಿ ಅಖಿಲ ಕರ್ನಾಟಕ ಹೇಮರೆಡ್ಡಿ ಮಲ್ಲಮ್ಮ ಮಹಿಳಾ ಅಭಿವೃದ್ಧಿ ಸಂಸ್ಥೆಯ 7ನೇ ವರ್ಷದ ವಾರ್ಷಿಕ ಸಭೆ ಜರುಗಿತು. ಸಂಸ್ಥೆಯ ಮಹಿಳಾ ಮುಖಂಡರು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ಪೂಜಿಯನ್ನ ನೆರವೇರಿಸಿ ವರದಿ ಸಲ್ಲಿಸಿದರು. ಬಳಿಕ ಸಭೆಯನ್ನು ಉದ್ದೇಶಿಸಿ ಡಾ.ಶೈಲಜಾ ಅವರು ಪ್ರಸ್ತಾವಿಕ ಭಾಷಣ ಮಾಡಿದರು.

ಬಳಿಕ ಸಮಾರಂಭದದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ನೂತನ ಸದಸ್ಯರಾಗಿ ಆಯ್ಕೆಯಾದ ಡಾ.ಚಂದ್ರಕಲಾ ಬಿದರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 

ಸಭೆಯಲ್ಲಿ ಸಂಸ್ಥೆಯ ಅಧ್ಯಕ್ಷರಾದ ವಿಶಾಲಾಕ್ಷೀ ಕರಡಿ, ಖಜಾಂಚಿ ಶರಣಮ್ಮ ಪಾಟೀಲ್ ಇದ್ದರು, ಸುಜಾತಾ ರೆಡ್ಡಿ ಅವರು ಸ್ವಾಗತಿಸಿದರು. ವಿಜಯಲಕ್ಷ್ಮಿ ಪಾಟೀಲ್ ವಂದಿಸಿದರು. ಸರೋಜಾ ಅವರು ನಿರೂಪಿಸಿದರು

.