ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ : ಸಿದ್ದು ಮಾನಕರ್ ಆಗ್ರಹ

ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ :  ಸಿದ್ದು ಮಾನಕರ್ ಆಗ್ರಹ

 ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ : ಸಿದ್ದು ಮಾನಕರ್ ಆಗ್ರಹ

ಕಲಬುರಗಿ: ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನಿಗೆ ರಾಜ್ಯ ಪಾಲರು ಅನುಮತಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ರಾಜ್ಯಪಾಲರ ಆದೇಶ ಎತ್ತಿ ಹಿಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ತನ್ನ ಸ್ನಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಬಿಜೆಪಿ ಮುಖಂಡ ಸಿದ್ದು ಮಾನಕರ್ ಆಗ್ರಹಿಸಿದ್ದಾರೆ.

  ಈ ದೇಶದ ಕಾನೂನು ಎಲ್ಲರಿಗೂ ಒಂದೇ ಆಗಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡದೆ ಕಾಲಹರಣ ಮಾಡುತ್ತಿರುವುದು ನ್ಯಾಯಾಂಗ ಮತ್ತು ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ. ರಾಜ್ಯದ ಸಂಪತ್ತು ಲೂಟಿಗೈದವರನ್ನು ಜೈಲಿಗೆ ಅಟ್ಟಬೇಕು, ನಮ್ಮದು ನುಡಿದಂತೆ ನಡೆವ ಸರಕಾರ ಎಂದೆಲ್ಲಾ ಬೊಗಳೆ ಬಿಡುತ್ತಿದ್ದ ಸಿದ್ದರಾಮಯ್ಯ ನವರು ತಮ್ಮ ಮಾತನ್ನು ಉಳಿಸಿಕೊಳ್ಳುವ ಅವಕಾಶ ಒದಗಿ ಬಂದಿದೆ. 

ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣ, ಡಿನೋಟಿಫಿಕೇಷನ್ ಪ್ರಕರಣ, ಅಧಿಕಾರ ದುರ್ಬಳಕೆ, ಸ್ವಜನ ಪಕ್ಷ ಪಾತ ಸಹಿತ ಸಾಲು ಸಾಲು ಹಗರಣಗಳನ್ನು ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನಿನ ಕುಣಿ ಕೆಯಿಂದ ಪಾರಾಗಲು ಸಾಧ್ಯವೇ ಇಲ್ಲ. ಅಧಿಕಾರ ದಾಹದಿಂದ ಜನರ ಭಾವನೆಯೊಂದಿಗೆ ಚೆಲ್ಲಾಟವಾಡಿ, ರಾಜ್ಯವನ್ನು ದಿವಾಳಿಯ ಅಂಚಿಗೆ ನೂಕಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ರಾಜ್ಯದ ಜನತೆಗೆ ಕ್ಷೇಮ ಎಂದು ಅವರು ಆಗ್ರಹಿಸಿದರು

.