ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಹೈಕಮಾಂಡ್ ರಕ್ಷಿಸುತ್ತಿರುವುದಕ್ಕೆ ಕಾರಣ ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಹೈಕಮಾಂಡ್ ರಕ್ಷಿಸುತ್ತಿರುವುದಕ್ಕೆ ಕಾರಣ ?

ಪ್ರಚಲಿತ ಸುದ್ದಿ 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಹೈಕಮಾಂಡ್ ರಕ್ಷಿಸುತ್ತಿರುವುದಕ್ಕೆ ಕಾರಣ..?

ಕಲಬುರಗಿ : ರಾಜ್ಯದಲ್ಲಿ ಹಿಂದುಳಿದ ವರ್ಗಗಳ ನಾಯಕ ಸಮೂಹ ನಾಯಕ ಎಂದೆ ಗುರುತಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೂಡಾ ಹಗರಣದಲ್ಲಿ ಮೊದಲಿಗೆ ರಾಜ್ಯಪಾಲರಿಂದ ಆನಂತರ ಹೈಕೋರ್ಟ್ ತೀರ್ಪಿನಿಂದ ಅವರಿಗೆ ಸಂಕಷ್ಟ ಎದುರಾಗಿದೆ.

ಇನ್ನೊಂದೆಡೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ವಿರೋಧ ಪಕ್ಷಗಳು ಹಾಗೂ ಸ್ವಪಕ್ಷದ ಕಾಣದ ಕೈಗಳು ಸಾಕಷ್ಟು ಹೋರಾಟ ನಡೆಸುತ್ತಿದ್ದರು ಕಾಂಗ್ರೆಸ್ ಹೈಕಮಾಂಡ್ ಮಾತ್ರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆಂಬಲಕ್ಕೆ ನಿಂತಿರುವುದು ದೇಶದ ಜನರು ಹುಬ್ಬೇರಿಸುವಂತೆ ಮಾಡಿದೆ. 

ಈ ನಿರ್ಧಾರದ ಹಿಂದೆ ಕಾಂಗ್ರೆಸ್ ಪಕ್ಷದ ಹಿತಾಸಕ್ತಿ ಅಡಗಿರುವ ಶಂಕೆ ತಳ್ಳಿ ಹಾಕುವಂತಿಲ್ಲ.

ರಾಜ್ಯದಲ್ಲಿ ಸಿದ್ದರಾಮಯ್ಯ ಅವರನ್ನು ಬದಲಾಯಿಸಿದರೆ ಅವರ ಬೆಂಬಲಿಗರು ಪಕ್ಷ ತೊರೆದು ಹೊಗುವ ಭೀತಿಯಿರುವ ಕಾರಣಕ್ಕಾಗಿಯೋ ಅಥವಾ ದೇಶದಲ್ಲಿ ಇತರೆ ರಾಜ್ಯಗಳಲ್ಲಿ ಮುಂದಿನ ದಿನಗಳಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಹಿನ್ನಡೆಯಾಗುವ ಸಂಭವದಿಂದಲೋ ಏನೋ ಕಾಂಗ್ರೆಸ್ ಹೈಕಮಾಂಡ್ ಮಾತ್ರ ಇಷ್ಟೊಂದು ಜಾಣ ನಡೆ ಅನುಸರಿಸುತ್ತಿರುವುದು ಗೌಪ್ಯವಾಗಿ ಉಳಿದಿಲ್ಲ.

ಒಂದು ವೇಳೆ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂಬ ಆರೋಪ ಸಾಬೀತಾದರೆತಾಗುತ್ತದೆ ಎಂದು ಹೈಕಮಾಂಡ್ ಹೈಕೋರ್ಟ್ ನ ಆದೇಶದ ವಿರುದ್ಧ ಮುಂದಿನ ಕಾನೂನು ಸಮರಕ್ಕೆ ಸಿದ್ಧವಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಎಲ್ಲ ಬೆಳವಣಿಗೆಗಳು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಆಶ್ಚರ್ಯ ಮೂಡಿಸಿದೆ.

ಆದ್ದರಿಂದ ಸಿದ್ದರಾಮಯ್ಯ ಅವರಿಗಿಂತಲೂ ಕಾಂಗ್ರೆಸ್ ಹೈಕಮಾಂಡ್ ತನ್ನ ವರ್ಚಸ್ಸನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಿಂದ ರಾಜೀನಾಮೆ ಪಡೆಯಲು ಹಿಂಜರಿಯುತ್ತಿರುವುದು ಸೂರ್ಯನಷ್ಟೆ ಸತ್ಯ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಯನ್ನು ಕುರಿತು ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ. 

ಪ್ರೊ ಯಶವಂತರಾಯ ಅಷ್ಠಗಿ-ರಾಜಕೀಯ ವಿಶ್ಲೇಷಕರು, ಕಲಬುರಗಿ