ಎಂ ಎಸ್ ಇರಾಣಿ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಎಂ ಎಸ್ ಇರಾಣಿ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಎಂ ಎಸ್ ಇರಾಣಿ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ 

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ ಯೋಜನೆಯ ಅಡಿಯಲ್ಲಿ ವಿದ್ಯಾರ್ಥಿಗಳಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಈ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಕಲಬುರ್ಗಿ ಸರ್ಕಾರಿ ಆಸ್ಪತ್ರೆಯ ವೈದ್ಯರಾದ ಡಾ ರಾಕೇಶ್,ಡಾ ಸೌಮ್ಯ,ಡಾ ಬಬಿತಾ,ಡಾ ಕಮರುನ್ನಿಸಾ ವಿದ್ಯಾರ್ಥಿಗಳಿಗೆ ಉಚಿತ ತಪಾಸಣಾ ನಡೆಸಿ ಸಲಹೆ ನೀಡಿದರು ಸುಮಾರು 100 ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಈ ಶಿಬಿರದ ಲಾಭ ಪಡೆದುಕೊಂಡರು. ಕಾಲೇಜಿನ ಉಪನ್ಯಾಸಕರಾದ ಶ್ರೀ ಐ ಕೆ ಪಾಟೀಲ್, ಡಾ ಪಾಂಡುರಂಗ ಚಿಂಚನಸೂರ, ಶ್ರೀ ಗುರುಶಾಂತ್ ಹೂಗಾರ, ಶ್ರೀಮತಿ ಮಲಕಮ್ಮ ಪಾಟೀಲ್, ಶ್ರೀಮತಿ ಅಶ್ವಿನಿ ಪಾಟೀಲ್, ಕುಮಾರಿ ಭಾಗ್ಯಶ್ರೀ ಎಸ್ ಬೇನೂರ ಉಪಸ್ಥಿತರಿದ್ದರು.