ಸಕ್ಕರೆ ನಾಡಿನಲ್ಲಿ ಶಶೀಲ್ ನಮೋಶಿ ಪಾದಯಾತ್ರೆ
ಸಕ್ಕರೆ ನಾಡು ಮಂಡ್ಯದಲ್ಲಿನ ಪಾದಯಾತ್ರೆಯಲ್ಲಿ- ವಿಧಾನ ಪರಿಷತ್ ಸದಸ್ಯ ಶ್ರೀ ಶಶೀಲ್ ಜಿ ನಮೋಶಿ.
ಬೆಂಗಳೂರು- ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣದ ಸಂಬಂಧ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ಎನ್‌ಡಿಎ ಮೈತ್ರಿಕೂಟ ಬೆಂಗಳೂರಿನಿಂದ ಮೈಸೂರುವರೆಗೆ ನಡೆಸುತ್ತಿರುವ ಪಾದಯಾತ್ರೆ ಪ್ರಾರಂಭ ವಾಗಿ ಇಂದು 4ನೇ ದಿನಕ್ಕೆ ಕಾಲಿಟ್ಟಿತು.ಇಂದು ಸಕ್ಕರೆ ನಗರ ಮಂಡ್ಯದಲ್ಲಿನ ಪಾದಯಾತ್ರೆಯಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಕೇಂದ್ರ ಸಚಿವರಾದ ಶ್ರೀ ಕುಮಾರ ಸ್ವಾಮಿ ವಿರೋಧ ಪಕ್ಷದ ನಾಯಕರಾದ ಶ್ರೀ ಅಶೋಕ್ ಹಾಗೂ ಭಾಜಪ ಹಾಗೂ ಜೆಡಿಎಸ್ ನ ಹಿಂದಿನ ಸಚಿವರು ಹಾಲಿ ಶಾಸಕರು , ವಿಧಾನ ಪರಿಷತ್ ಸದಸ್ಯರು ಮಾಜಿ ಶಾಸಕರು ರಾಜ್ಯದ ಎಲ್ಲ ಕ್ಷೇತ್ರಗಳ ನಾಯಕರು ಹಾಗೂ ಕಾರ್ಯಕರ್ತರ ಜೋತೆಗೂಡಿ ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಶಶೀಲ್ ಜಿ ನಮೋಶಿ ಭಾಗವಹಿಸಿದ್ದರು.