ಕಮಲನಗರ: ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ
ಕಮಲನಗರದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು, ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಗುರುವಾರ ಹಮ್ಮಿಕೊಳ್ಳಲಾದ ಅನಿರ್ಧಿಷ್ಠಾವಧಿ ಮುಷ್ಕರದಲ್ಲಿ ತಹಶೀಲ್ದಾರ್ ಅಮೀತಕುಮಾರ ಕುಲಕರ್ಣಿ ಅವರ ಮೂಲಕ ಕಂದಾಯ ಸಚಿವರಿಗೆ ಬರೆದ ಮನವಿ ಪತ್ರವು ಗ್ರಾಮ ಆಡಳಿತ ಅಧಿಕಾರಿಗಳ ತಾಲ್ಲೂಕು ಸಂಘದ ಅಧ್ಯಕ್ಷ ಶಶಿಕುಮಾರ ಬಿರಾದಾರ ನೇತೃತ್ವದಲ್ಲಿ ಸಲ್ಲಿಸಲಾಯಿತು.
ಕಮಲನಗರ: ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ
ಕಮಲನಗರ: ರಾಜ್ಯ ಸಂಘದ ಕಾರ್ಯಕಾರಿ ಸಮಿತಿ ತೀರ್ಮಾನದಂತೆ ಗ್ರಾಮ ಆಡಳಿತಾಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆ.26ರಿಂದ ನಿರಂತರ ಅನಿರ್ದಿಷ್ಟಾವದಿ üಮುಷ್ಕರ ನಡೆಸಲಾಗುತ್ತಿದೆ ಎಂದು ಗ್ರಾಮ ಆಡಳಿತಾಧಿಕಾರಿಗಳ ತಾಲ್ಲೂಕು ಘಟಕದ ಅಧ್ಯಕ್ಷ ಶಶಿಕುಮಾರ ಬಿರಾದಾರ ತಿಳಿಸಿದರು.
ಕಮಲನಗರ ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಗುರುವಾರ ಅನಿರ್ದಿಷ್ಟ ಅವಧಿಗೆ ಮುಷ್ಕರ್ ನಡೆಸುವ ಸ್ಥಳಕ್ಕೆ ತಹಶೀಲ್ದಾರ್ ಅಮಿತಕುಮಾರ ಕುಲಕರ್ಣಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.
ಇಲಾಖೆಯಿಂದ ಅಭಿವೃದ್ಧಿ ಪಡಿಸಿರುವ ಮೊಬೈಲ್, ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರಲಾಗುತ್ತಿದೆ. ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್, ಲ್ಯಾಪ್ ಟಾಪ್ ಅದಕ್ಕೆ ಅವಶ್ಯವಿರುವ ಇಂಟರ್ ನೆಟ್ ಹಾಗೂ ಸ್ಕ್ಯಾನರ್‍ಗಳನ್ನು ಒದಗಿಸದೇ ಕರ್ತವ್ಯ ನಿರ್ವಹಿಸುವಂತೆ ಒತ್ತಡ ಹೇರುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳು ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ ಎಂದರು.
ಆಧುನಿಕ ತಂತ್ರಾಂಶಕ್ಕೆ ಸಂಬಂಧಿಸಿದಂತೆ ಅವಶ್ಯಕವಾಗಿರುವ ಸೌಲಭ್ಯವನ್ನು ಕಲ್ಪಿಸುವವರೆಗೆ ಸೆ.26ರಿಂದ ಆಧಾರ್ ಸೀಡ್, ಲ್ಯಾಂಡ್ ಬೀಟ್, ಬಗರ್ ಹುಕುಂ, ಹ್ಕಕುಪತ್ರ, ಸಮೂನೆ 1-5 ವೆಬ್ ಆಪ್ಲಿಕೇಶನ್ ಮತ್ತು ಪೌತಿ ಆಂದೋಲನ ಆಯಾಪ್ ತಂತ್ರಾಂಶಗಳ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ. ಪದನ್ನೋತಿ ವರ್ಗಾವಣೆ, ನೌಕರರ ಅಮಾನತ್ತು ಸೇರಿ ಒಟ್ಟು 34 ಮೂಲಸೌಲಭ್ಯಗಳು ಕಲ್ಪಿಸುವಂತೆ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದು ಅವುಗಳಿಗೆ ಸರ್ಕಾರ ಸ್ಪಂದಿಸದೇ ಇದ್ದಲ್ಲಿ ನಮ್ಮೇಲ್ಲರ ನ್ಯಾಯಯುತ ಬೇಡಿಕೆ ಈಡೇರಿಸುವವರೆಗೂ ಮುಷ್ಕರ ನಡೆಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಅಮಿತಕುಮಾರ ಕುಲಕರ್ಣಿ ಮನವಿ ಪತ್ರ ಸ್ವೀಕರಿಸಿದ ನಂತರ ಮಾತನಾಡಿ, ಕೂಡಲೇ ತಮ್ಮ ಬೇಡಿಕೆ ಪತ್ರ ಕಂದಾಯ ಸಚಿವ ಮಾನ್ಯ ಶ್ರೀ ಕೃಷ್ಣ ಭೈರೆಗೌಡ ಅವರ ಕಚೇರಿ ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ಭರವಸೆ ನೀಡಿದರು.
ಗ್ರಾಮ ಆಡಳಿತ ಅಧಿಕಾರಿಗಳಾದ ಲೋಕೇಶ ಪಿಸೋಳೆ, ಪ್ರವೀಣ ಬಿರಾದಾರ, ಮಹೇಶ ಕಳಸೆ, ಮಂಜುನಾಥ, ರಮೇಶ, ಮಲ್ಲಪ್ಪ, ನಿಂಗಪ್ಪಾ, ಅನೀಲ, ಸುಧೀರ, ಇಮಾಮ್, ವಿಠ್ಠಲ, ವೀರು, ಆಕಾಶ, ತುಳಸಿರಾಮ, ಲಕ್ಷ್ಮಣ, ಚೈತ್ರಾ ಇದ್ದರು.