ಡಾ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿ ಹೃದಯ ವೈಶಾಲ್ಯತೆ ಮೆರೆದ ಪ್ರಧಾನಿ ಮೋದಿ

ಡಾ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿ ಹೃದಯ ವೈಶಾಲ್ಯತೆ ಮೆರೆದ ಪ್ರಧಾನಿ ಮೋದಿ

ಡಾ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿ ಹೃದಯ ವೈಶಾಲ್ಯತೆ ಮೆರೆದ ಪ್ರಧಾನಿ ಮೋದಿ 

ನವದೆಹಲಿ : ಜಮ್ಮು ಕಾಶ್ಮೀರದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡುತ್ತಲೆ ಅಸ್ವಸ್ಥಗೊಂಡಿದ್ದ ಎಐಸಿಸಿ ಅಧ್ಯಕ್ಷ ಡಾ ಮಲ್ಲಿಕಾರ್ಜುನ ಖರ್ಗೆಯವರ ಆರೋಗ್ಯ ಕುರಿತು ಪ್ರಧಾನಿ ಮೋದಿ ಕರೆ ಮಾಡಿ ವಿಚಾರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಕರೆ ಮಾಡಿ ಖರ್ಗೆಯವರ ಆರೋಗ್ಯ ವಿಚಾರಿಸಿದ್ದಾರೆ. 

ಕಾರ್ಯಕ್ರಮದಲ್ಲಿ ಮಾತನಾಡಿದ ನಂತರ ಖರ್ಗೆ ಅಸ್ವಸ್ಥರಾಗಿದ್ದು, ಕೆಲಕಾಲ ಅವರನ್ನು ವೇದಿಕೆಯ ಮೇಲೆ ಕೂರಿಸಲಾಯಿತು.

ಸ್ವಲ್ಪ ಹೊತ್ತು ಕುಳಿತ ನಂತರ ಮತ್ತೊಮ್ಮೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಅವರು ನಂತರ ವೇದಿಕೆ ಮೇಲೆ ನಿಂತು ಭಾಷಣ ಆರಂಭಿಸಿ ಜಮ್ಮು-ಕಾಶ್ಮೀರ ರಾಜ್ಯ ಸ್ಥಾನಮಾನ ಮರುಸ್ಥಾಪಿಸಲು ಹೋರಾಟ ನಡೆಸುತ್ತೇವೆ ಎಂದರು. ಜಮ್ಮು ಮತ್ತು ಕಾಶ್ಮೀರದ ಯುವಕರ ಭವಿಷ್ಯಕ್ಕಾಗಿ ಮೋದಿಯವರು ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ, ವಾಸ್ತವವೆಂದರೆ ಕಳೆದ 10 ವರ್ಷಗಳಲ್ಲಿ ಇಡೀ ದೇಶದ ಯುವಕರನ್ನು ಕತ್ತಲೆಗೆ ತಳ್ಳಲಾಗಿದೆ, ಇದಕ್ಕೆ ಸ್ವತಃ ಮೋದಿಯವರೇ ಕಾರಣ ಎಂದು ಖರ್ಗೆ ಆರೋಪಿಸಿದ್ದಾರೆ.

ಇದೆಲ್ಲದರ ನಡುವೆ ಫೋನ್ ಕರೆ ಮಾಡಿ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ ಅವರ ನಡೆ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.