ಸಕ್ರೀಯ ಕಾರ್ಯಕರ್ತರಿಗೆ ಮುಂದಿನ ದಿನಗಳಲ್ಲಿ ಅಧಿಕಾರ : ಶಾಸಕ ಶರಣಗೌಡ ಪಾಟೀಲ್ ಕಂದಕೂರ
ಸಕ್ರೀಯ ಕಾರ್ಯಕರ್ತರಿಗೆ ಮುಂದಿನ ದಿನಗಳಲ್ಲಿ ಅಧಿಕಾರ : ಶಾಸಕ ಶರಣಗೌಡ ಪಾಟೀಲ್ ಕಂದಕೂರ
ಕಲಬುರಗಿ : ಜನತಾದಳ (ಎಸ್) ಪಕ್ಷದ ಸಂಘಟನೆಗೆ ಕಾರ್ಯಕರ್ತರು ಯಾರು ಹೆಚ್ಚು ಸದಸ್ಯತ್ವವನ್ನು ಮಾಡುತ್ತಾರೋ ಮತ್ತು ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿಯುವ ಕಾರ್ಯಕರ್ತರನ್ನು
ಗುರುತಿಸಿ ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ್, ಪಾಲಿಕೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡಲಾಗುವುದು ಹಾಗೂ ಕೇಂದ್ರ ಸರ್ಕಾರದ ವಿವಿಧ ನಿಗಮ ಮಂಡಳಿಗಳಿಗೆ ಅವಕಾಶ ಕಲ್ಪಿಸಿ ಕೊಡಲಾಗುವುದು ಎಂದು ಗುರುಮಠಕಲ್ ಶಾಸಕ ಶರಣಗೌಡ ಪಾಟೀಲ್ ಕಂದಕೂರ ಹೇಳಿದರು.
ಕಲಬುರಗಿ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ, ಪಕ್ಷದ ಸದಸ್ಯತ್ವ ಅಭಿಯಾನ ಹಾಗೂ ಬೂತ್ ಅಭಿಯಾನ ಉದ್ದೇಶಿಸಿ ಮಾತನಾಡಿದರು .
ಪಕ್ಷದೊಳಗಿನ ಭಿನ್ನಾಭಿಪ್ರಾಯಗಳನ್ನು ಪಕ್ಷದ ವೇದಿಕೆಯಲ್ಲಿ ಬಗೆಹರಿಸಿಕೊಳ್ಳಬೇಕು ಬಹಿರಂಗವಾಗಿ ಚರ್ಚಿಸಬಾರದೆಂದು ಎಂದು ಕಿವಿಮಾತು ಹೇಳಿದರು.
ಒಂದು ಕಾಲದಲ್ಲಿ ಅವಿಭಜಿತ ಕಲಬುರಗಿ ಜಿಲ್ಲೆಯಲ್ಲಿ ನಮ್ಮ ಪಕ್ಷ ಏಳು ಜನ ಶಾಸಕರನ್ನು ಹೊಂದಿತ್ತು .
,ರಾಜಕೀಯ ಬೆಳವಣಿಗೆಗಳಿಂದ ನಾಯಕರು ಬೇರೆ ಬೇರೆ ಪಕ್ಷಕ್ಕೆ ಸೇರಿಕೊಂಡಿದ್ದರು. ಪಕ್ಷವನ್ನು ಬಲಪಡಿಸುವುದು ಕಾರ್ಯಕರ್ತರೇ ಹೊರತು ನಾಯಕರಲ್ಲ .
ಕಾರ್ಯಕರ್ತರು ಮನಸ್ಸು ಮಾಡಿದರೆ ಎಂತಹ ನಾಯಕರನ್ನು ಸೃಷ್ಟಿಸಬಹುದು ಎಂದರು.
ನಮ್ಮೆಲ್ಲರ ನಾಯಕರಾದ ಮಾಜಿ ಪ್ರಧಾನಿ ಎಚ್ .ಡಿ ದೇವೇಗೌಡರ ಮಾರ್ಗದರ್ಶನ ಹಾಗೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಯವರ ಸಾರಥ್ಯದಲ್ಲಿ ಜನತಾದಳ (ಜಾತ್ಯತೀತ) ಪಕ್ಷವನ್ನು ಪುನಶ್ಚೇತನಗೋಳಿಸಲು ನಿರ್ಧರಿಸಲಾಗಿದೆ ಎಂದು ನುಡಿದರು.
ಕಲಬುರಗಿ ಜಿಲ್ಲೆಯಲ್ಲಿ 9 ವಿಧಾನಸಭಾ ಮತಕ್ಷೇತ್ರಗಳಿದ್ದು ಇಲ್ಲಿ ಬೂತ್ ಮಟ್ಟದ ಪಕ್ಷವನ್ನು ಸಂಘಟಿಸಬೇಕು ಎಂದು ಮಾಜಿ ಶಾಸಕ ರಾಜ ವೆಂಕಟಪ್ಪ ನಾಯಕ್ ಮಾತನಾಡಿದರು.
ಕೇಂದ್ರದಲ್ಲಿ ಎನ್ ಡಿ ಎ ಸರ್ಕಾರ ಅಧಿಕಾರಕ್ಕೆ ಬರಲು ಜೆಡಿಎಸ್ ಪಕ್ಷದ
ಕಾರ್ಯಕರ್ತರ ದೊಡ್ಡ ಶ್ರಮವಿದೆ. ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಮಾಡಿಕೊಂಡು ಅಭ್ಯರ್ಥಿ ಸೋಲು ಕಂಡರು ಜೇವರ್ಗಿ ಮತ ಕ್ಷೇತ್ರದಿಂದ 5 ಸಾವಿರ, ಗುರುಮಠಕಲ್ ಮತ ಕ್ಷೇತ್ರದಿಂದ 16 ಸಾವಿರ ಮತಗಳನ್ನು ನೀಡಿ ಕೊಟ್ಟಿದ್ದೆ ಎಂದು ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಅವರು ಹೇಳಿದರು.
ಪಕ್ಷದ ಮುಖಂಡರಾದ ಸಂಜೀವನ ಯಾಕಾಪೂರ, ಮಹೇಶ್ವರಿ ವಾಲಿ, ಕೃಷ್ಣಾ ರೆಡ್ಡಿ, ಬಸವರಾಜ ಪಾದಯಾತ್ರಿ ಪಕ್ಷದ ರಾಜ್ಯ ಕಾರ್ಯದರ್ಶಿ ಬಸವರಾಜ ಬಿರಬಿಟ್ಟೆ, ಮಹಾನಗರ ಪಾಲಿಕೆ ಸದಸ್ಯರಾದ ಅಲೀಮ ಪಟೇಲ್ ಸೇರಿದಂತೆ ಪಕ್ಷದ ಪ್ರಮುಖರು, ಅಸಂಖ್ಯಾತ ಕಾರ್ಯಕರ್ತರು ಹಾಗೂ ಪಕ್ಷದ ಅಭಿಮಾನಿಗಳು ಭಾಗವಹಿಸಿದ್ದರು.