ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಹಾನಿ-ಚಂದ್ರಶೇಖರ ದೊಡಮನಿ
ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಹಾನಿ-ಚಂದ್ರಶೇಖರ ದೊಡಮನಿ
ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದೆ. ಆದ್ದರಿಂದ ಪರಿಸರ ಉಳಿಸುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಕಲಬುರ್ಗಿ ವಿಭಾಗದ ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿ ಡಾ ಚಂದ್ರಶೇಖರ ದೊಡಮನಿ ಹೇಳಿದರು.
ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಹಾಗೂ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಡೆದ ಸ್ವಚ್ಛ ಹಿ ಸೇವಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು.
ಪ್ಲಾಸ್ಟಿಕ್ ಬಳಕೆ ಇಂದು ಅತಿಯಾಗಿದ್ದು ಇದರಿಂದಾಗಿ ಮಾನವ ಕುಲಕ್ಕೆ, ಪ್ರಾಣಿ ಸಂಕುಲಕ್ಕೆ ಅಪಾಯ ಬಂದೊದಗಿದೆ. ಅನೇಕ ಪ್ರಾಣಿಗಳು ಪ್ಲಾಸ್ಟಿಕ್ ಸೇವಿಸಿ ಜೀವ ಕಳೆದುಕೊಳ್ಳುತ್ತಿವೆ. ಮನುಷ್ಯನಿಗೆ ಮಾರಕ ಕ್ಯಾನ್ಸರ್ ದಂತ ರೋಗಗಳು ಬರುತ್ತಿವೆ ಎಂದು ಹೇಳಿದರು.
ಇಂದು ವಿದ್ಯಾರ್ಥಿಗಳು ಇವುಗಳನ್ನು ತಿಳಿದುಕೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.
ಸದೃಢವಾದ ಶರೀರದಲ್ಲಿ ಸದೃಢವಾದ ಮನಸ್ಸು ಇರುತ್ತದೆ. ಎಂಬ ಗಾದೆ ಮಾತಿನಂತೆ ನಮ್ಮ ಆರೋಗ್ಯದ ದೃಷ್ಟಿಯಿಂದ ನಾವು ವಾಸಿಸುವ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಂದು ಹೇಳಿದರು.
ಸ್ವಚ್ಛ ಭಾರತ ಅಭಿಯಾನ ವಿಧ್ಯಾರ್ಥಿಗಳಿಂದ ಪ್ರಾರಂಭವಾದಗಲೇ ಇದಕ್ಕೆ ಯಶಸ್ಸು ಸಿಗುತ್ತದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಶ್ರೀಮತಿ ಶಿಲ್ಪಾ ಅಲ್ಲದ ಹೇಳಿದರು.
ವೇದಿಕೆಯ ಮೇಲೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎಚ್ ಬಿ ಪಾಟೀಲ್ ನೆಹರು ಯುವ ಕೇಂದ್ರದ ಯುವ ಸಂಘಟಕ ದೇವರಾಜ ಕನ್ನಡಿಗ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪತ್ರಿಕಾ ಮಾಧ್ಯಮದ ಸಂಯೋಜಕ ಉಪಸ್ಥಿತರಿದ್ದರು
ನಂತರ ಕಾಲೇಜಿನ ವಿದ್ಯಾರ್ಥಿಗಳು ಸ್ವಚ್ಛತಾ ಅಭಿಯಾನದ ಬಗ್ಗೆ ಜಾಗೃತಿ ಮೂಡಿಸಿದರು. ವಿದ್ಯಾರ್ಥಿಗಳಿಗೆ ಸ್ವಚ್ಛತಾ ಅಭಿಯಾನದ ಪ್ರೇಮಾಣ ವಚನ ಬೋಧಿಸಲಾಯಿತು ಕಾರ್ಯಕ್ರಮದ ನಿರೂಪಣೆಯನ್ನು ಉಪನ್ಯಾಸಕ ಐ ಕೆ ಪಾಟೀಲ್ ನೇರವೇರಿಸಿ , ವಂದಿಸಿದರು.