ಎಸ್ ಎಸ್ ಎಲ್ ಸಿ ಪ್ರಶ್ನೆ ಪತ್ರಿಕೆ ಮಾದರಿ ಬದಲಾವಣೆಗೆ ಕಲಬುರ್ಗಿ ಜಿಲ್ಲಾ ಸಮಾಜ ವಿಜ್ಞಾನ ಶಿಕ್ಷಕರ ವೇದಿಕೆ ಆಗ್ರಹ

ಎಸ್ ಎಸ್ ಎಲ್ ಸಿ ಪ್ರಶ್ನೆ ಪತ್ರಿಕೆ ಮಾದರಿ ಬದಲಾವಣೆಗೆ ಕಲಬುರ್ಗಿ ಜಿಲ್ಲಾ ಸಮಾಜ ವಿಜ್ಞಾನ ಶಿಕ್ಷಕರ ವೇದಿಕೆ ಆಗ್ರಹ

ಎಸ್ ಎಸ್ ಎಲ್ ಸಿ ಪ್ರಶ್ನೆ ಪತ್ರಿಕೆ ಮಾದರಿ ಬದಲಾವಣೆಗೆ ಕಲಬುರ್ಗಿ ಜಿಲ್ಲಾ ಸಮಾಜ ವಿಜ್ಞಾನ ಶಿಕ್ಷಕರ ವೇದಿಕೆ ಆಗ್ರಹ

ಈಗಿರುವ ಎಸ್ಸೆಸ್ಸೆಲ್ಸಿ ಪ್ರಶ್ನೆ ಪತ್ರಿಕೆಯ ಮಾದರಿಯನ್ನು ಬದಲಾಯಿಸಿ ಈಗ ನಡೆಯುತ್ತಿರುವ ಪಿಯುಸಿ ಪ್ರಶ್ನೆ ಪತ್ರಿಕೆಯ ಮಾದರಿಯಂತೆ ಬದಲಾಯಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಕಲಬುರ್ಗಿ ಜಿಲ್ಲೆಯ ಸಮಾಜ ವಿಜ್ಞಾನ ಶಿಕ್ಷಕರ ವೇದಿಕೆಯ ವತಿಯಿಂದ ಪ್ರೌಢಶಾಲಾ ಸಹ ಶಿಕ್ಷಕರ ಜಿಲ್ಲಾ ಅಧ್ಯಕ್ಷ ಶ್ರೀ ಮಹೇಶ ಹೂಗಾರ ಹಾಗೂ ಕಾರ್ಯದರ್ಶಿಗಳಾದ ಶ್ರೀ ಜಮೀಲ್ ಇಮ್ರಾನ್ ಅವರ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀ ಶಶೀಲ್ ಜಿ ನಮೋಶಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪಿಯುಸಿ ವಿದ್ಯಾರ್ಥಿಗಳಿಗಿಂತಲೂ ಬುದ್ಧಿ ಮಟ್ಟದಲ್ಲಿ ಕೆಳಗಿರುವ ಎಸ್ಸೆಸ್ಸೆಲ್ಸಿ ವಿಧ್ಯಾರ್ಥಿಗಳ ಪ್ರಶ್ನೆ ಪತ್ರಿಕೆ ಸ್ವಲ್ಪ ಕಠಿಣವಾಗಿದ್ದು ಇದರಿಂದಾಗಿ ವಿಧ್ಯಾರ್ಥಿಗಳಿಗೆ ತೊಂದರೆಯಾಗಿ ಫಲಿತಾಂಶ ಕಡಿಮೆ ಬರುತ್ತಿದೆ. ಹೀಗಾಗಿ ಪ್ರಶ್ನೆ ಪತ್ರಿಕೆಯ ಮಾದರಿ ಹಾಗೂ ಸಿ ಬಿ ಎಸ್ ಸಿ ಯಲ್ಲಿ ಅನುಸರಿಸುವ ಆಂತರಿಕ ಅಂಕಗಳ ಪರಿಗಣನೆ ಬಾಹ್ಯ ಪರೀಕ್ಷೆ ಅಂಕಗಳ ಪರಿಗಣನೆ ನಿಯಮವನ್ನು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೂ ಪರಿಗಣಿಸಬೇಕು ಎಂದು ಎಲ್ಲ ವಿಷಯಗಳ ಸಂಪನ್ಮೂಲ ಶಿಕ್ಷಕರು ಆಗ್ರಹಿಸಿದರು. ಮನವಿ ಸ್ವೀಕರಿಸಿದ ವಿಧಾನ ಪರಿಷತ್ ಸದಸ್ಯ ಶ್ರೀ ಶಶೀಲ್ ಜಿ ನಮೋಶಿ ನೀವು ನೀಡಿದ ಮನವಿ ಸೂಕ್ತವಾಗಿದ್ದು ಇದನ್ನು ಮಾನ್ಯ ಶಿಕ್ಷಣ ಸಚಿವರ ಗಮನಕ್ಕೆ ತಂದು ಇದನ್ನು ಸರಿಪಡಿಸಿ ವಿದ್ಯಾರ್ಥಿಗಳಿಗೆ ಅನುಕೂಲ ರೀತಿ ಆಗುವ ಹಾಗೆ ಮಾಡುವ ಭರವಸೆ ನೀಡಿದರು.