ಪರಿಸರ ಸ್ವಚ್ಛತೆ ಮತ್ತು ಸಂರಕ್ಷಣೆ ನಮ್ಮೆಲ್ಲರ ಹೊಣೆ ಶ್ರೀ ಶಶೀಲ್ ಜಿ ನಮೋಶಿ.
ಪರಿಸರ ಸ್ವಚ್ಛತೆ ಮತ್ತು ಸಂರಕ್ಷಣೆ ನಮ್ಮೆಲ್ಲರ ಹೊಣೆ ಶ್ರೀ ಶಶೀಲ್ ಜಿ ನಮೋಶಿ.
ಪರಿಸರ ಸ್ವಚ್ಚತೆ ಮತ್ತು ಸಂರಕ್ಷಣೆ ನಮ್ಮ ಮನೆ ಮತ್ತು ಕಚೇರಿಯಿಂದಲೇ ಆರಂಭವಾಗಬೇಕು ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಶಶೀಲ್ ಜಿ ನಮೋಶಿ ಆವರು ಹೇಳಿದರು
ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಡಾ ಎ ಬಿ ಮಾಲಕರೆಡ್ಡಿ ಹೋಮಿಯೋಪತಿ ಮೆಡಿಕಲ್ ಕಾಲೇಜಿನಲ್ಲಿ ನಡೆದ ಸ್ವಚ್ಛ ಹಿ ಸೇವಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.
ಪರಿಸರ ಶುಚಿತ್ವ ಮತ್ತು ಸಂರಕ್ಷಣೆಯ ಮಹತ್ವದ ಬಗ್ಗೆ ಪ್ರತಿನಿತ್ಯವೂ ಅರಿವು ಇರಬೇಕು. ಕೇವಲ ಪರಿಸರ ದಿನಾಚರಣೆಯಂತ ಕಾರ್ಯಕ್ರಮ ಹಾಗೂ ಇಂತಹ ಸ್ವಚ್ಛ ಹಿ ಸೇವಾದಂತ ಕಾರ್ಯಕ್ರಮಗಳಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಹೇಳಿದರಷ್ಟೆ ಸಾಲದು ಎಂದು ಹೇಳಿದರು
ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್‍ನ್ನು ಒಂದಲ್ಲ ಒಂದು ರೀತಿಯಲ್ಲಿ ಬಳಸುತ್ತೇವೆ. ಆದರೆ ಬಳಸಿದ್ದನ್ನು ಮರು ಬಳಕೆಗೆ ನೀಡುತ್ತಿಲ್ಲ. ಪ್ಲಾಸ್ಟಿಕ್‍ನ್ನು ಎಲ್ಲೆಂದರಲ್ಲಿ ಬಿಸಾಡುವುದು,ಒಲೆಗೆ ಉಪಯೋಗಿಸುವುದು ಸರಿಯಲ್ಲ. ಮಿಲಿಯನ್ ವರ್ಷವಾದರೂ ಪ್ಲಾಸ್ಟಿಕ್ ತನ್ನ ಸ್ಥಿತಿಯನ್ನು ಕಳೆದುಕೊಳ್ಳುವುದಿಲ್ಲ. ಆದ್ದರಿಂದ ಪ್ಲಾಸ್ಟಿಕ್ ಬಳಕೆ ಮಾಡಬಾರದು, ಬಟ್ಟೆ ಬ್ಯಾಗನ್ನು ಉಪಯೋಗ ಮಾಡಬೇಕೆಂದು ಕರೆ ನೀಡಿದರು.
ಪ್ಲಾಸ್ಟಿಕ್ ಬಳಿಕೆಯಿಂದ ಒಂದು ರೀತಿ ಭೂಮಿಗೆ ಭಾರವಿದ್ದಂತೆ, ವಾತಾವರಣವನ್ನು ಸ್ವಚ್ಚವಾಗಿಡಲು ಪ್ಲಾಸ್ಟಿಕ್‍ನಿಂದ ದೂರವಿರಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯ ಪ್ರವಾಸಿ ಕೇಂದ್ರಗಳು, ಹೋಟೆಲ್ ಗಳು ಮುಂತಾದ ಕಡೆ ಈ ಪ್ಲಾಸ್ಟಿಕ್ ಬಳಸಲೆಬಾರದು ಪ್ಲಾಸ್ಟಿಕ್ ಬಳಸದಂತೆ ಸ್ವಯಂ ನಿರ್ಭಂಧ ಸೇರಿಸಿಕೊಳ್ಳಬೇಕೆಂದು ಕರೆ ನೀಡಿದರು.
ಮರಗಿಡಗಳು ಇಲ್ಲದಿದ್ದರೆ ಬದುಕು ಅಸಾಧ್ಯ. ಪರಿಸರವನ್ನು ಸದಾ ರಕ್ಷಣೆ ಮಾಡಬೇಕು. ನದಿ, ಜಲವನ್ನು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಮೂಲಭೂತ ಕರ್ತವ್ಯವಾಗಿದೆ ಎಂದರು
ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ ರಾಜಾ ಭಿ ಭೀಮಳ್ಳಿ ಕಾರ್ಯದರ್ಶಿಗಳಾದ ಶ್ರೀ ಉದಯಕುಮಾರ್ ಚಿಂಚೋಳಿ, ಆಡಳಿತ ಮಂಡಳಿ ಸದಸ್ಯರಾದ ಶ್ರೀ ಅರುಣಕುಮಾರ ಪಾಟೀಲ್, ಡಾ ಶಿವಾನಂದ ಮೇಳಕುಂದಿ ಕಾಲೇಜಿನ ಪ್ರಾಚಾರ್ಯ ಡಾ ಎಸ್ ಎಸ್ ಪಾಟೀಲ್ ಹಾಗೂ ಉಪ ಪ್ರಾಚಾರ್ಯ ಡಾ ಲೋಖರೆ ಹಾಗೂ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.