ಕಾನೂನಿನ ಬಗ್ಗೆ ಅರಿವಿದ್ದಲ್ಲಿ ಮುಂಬರುವ ದಿನಗಳು ಉತ್ತಮ– ಡಿವೈಎಸ್ಪಿ ಚಂದ್ರಶೇಖರ
ಕಾನೂನಿನ ಬಗ್ಗೆ ಅರಿವಿದ್ದಲ್ಲಿ ಮುಂಬರುವ ದಿನಗಳು ಉತ್ತಮ– ಡಿವೈಎಸ್ಪಿ ಚಂದ್ರಶೇಖರ
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೊರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೋಸ್ಕರ “ಮಹಿಳಾ ಮತ್ತು ಮಕ್ಕಳಿಗೆ ಕಾನೂನು ಅರಿವು ಜಾಗೃತಿ” ಎಂಬ ಕಾರ್ಯಕ್ರಮವನ್ನು ನಡೆಸಲಾಯಿತು
ಕಲಬುರಗಿ ಉತ್ತರವಲಯದ ಡಿವೈಎಸ್ಪಿ ಗಳಾದ ಶ ಚಂದ್ರಶೇಖರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ , ಮಾತನಾಡುತ್ತಾ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಕಾನೂನಿನ ಬಗ್ಗೆ ಅರಿವಿದ್ದಲ್ಲಿ ಮುಂಬರುವ ದಿನಗಳಲ್ಲಿ ಅವರು ಉತ್ತಮ ಸಮಾಜ ರೂಪಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತಾರೆ ಎಂದು ಹೇಳಿದರು. ವಿದ್ಯಾರ್ಥಿಗಳು ಕಾನೂನಿನ ಬಗ್ಗೆ ಅಧ್ಯಯನ ಮಾಡಿ ಅರಿವು ಮೂಡಿಸಿಕೊಂಡು ಸಾರ್ವಜನಿಕರಿಗೂ ಸಹ ಕಾನೂನಿನ ಬಗ್ಗೆ ತಿಳಿ ಹೇಳಬೇಕು. ಗ್ರಾಮೀಣ ಭಾಗದಲ್ಲಿ ಅಕ್ಷರಸ್ಥರು ಕಡಿಮೆ ಇರುವುದರಿಂದ ಬಾಲ್ಯ ವಿವಾಹದ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತವೆ. ಹಾಗಾಗಿ ವಿದ್ಯಾರ್ಥಿಗಳು ಈ ಕಾಯ್ದೆಯ ಬಗ್ಗೆ ಅರಿತು ಸುತ್ತಲಿನ ಜನರಿಗೆ ಜಾಗೃತಿ ಮೂಡಿಸಬೇಕು. ಹೆಣ್ಣು ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾದರೆ ತಂದೆ, ತಾಯಿ, ಪೋಷಕರಿಗೆ ಅಥವಾ ಶಿಕ್ಷಕರಿಗೆ ತಿಳಿಸಬೇಕು. ಬಾಲ್ಯ ವಿವಾಹದ ಬಗ್ಗೆ ಮಕ್ಕಳಿಗೆ ತಿಳುವಳಿಕೆ ನೀಡಿ . ತೊಂದರೆಯಾದರೆ ಕಾನೂನಿನ ಸಹಾಯ ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಮಕ್ಕಳಿಗೆ ಸಲಹೆ ನೀಡಿದರು.
ಕಲಬುರಗಿ ಪೋಲಿಸ ಇಲಾಖೆಯ ಎ.ಸಿ.ಪಿ. ವಾಜೀದ ಪಟೇಲ್ ಅವರು ಮಾತನಾಡುತ್ತ ಮಕ್ಕಳು ಅಪರಿಚಿತರೊಂದಿಗೆ ಸಲಿಗೆಯಿಂದಿರಬಾರದು. ನಿಮ್ಮೊಂದಿಗೆ ಯಾರಾದರು ಅಸಭ್ಯವಾಗಿ ವರ್ತಿಸಿದರೆ ಮೊದಲು ಪೋಷಕರಿಗೆ ತಿಳಿಸಬೇಕು. ಮಕ್ಕಳು ಕಾನೂನಿನ ಬಗ್ಗೆ ತಿಳಿಯಲು ಪ್ರಯತ್ನ ಪಡಬೇಕು ಎಂದು ಹೇಳಿದರು.
ನಂತರ ಮಹಿಳಾ ಪಿ.ಎಸ್.ಐ. ಗಳಾದ ಶ್ರೀಮತಿ ನರ್ಮದಾ ಮಠಪತಿ ಅವರು ಮಾತನಾಡಿ, ಪ್ರತಿಯೊಬ್ಬ ನಾಗರಿಕರಿಗೂ ಕಾನೂನಿನ ಬಗ್ಗೆ ಅರಿವು ಮೂಡಿಸಲು ತಾಲೂಕುವಾರು ಕಾನೂನು ಸೇವಾ ಸಮಿತಿಯನ್ನು ರಚಿಸಿ ಜನರಿಗೆ ಮತ್ತು ಮಕ್ಕಳಿಗೆ ಕಾನೂನಿನ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ನ್ಯಾಯಾಂಗವು ಅತ್ಯಂತ ಶ್ರೇಷ್ಠವಾದುದಾಗಿದೆ. ಇದು ಮನುಷ್ಯರ ಜೀವನದಲ್ಲಿ ರಕ್ಷಾ ಕವಚದಂತೆ ಕೆಲಸ ಮಾಡುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಉಪನ್ಯಾಸಕರಾದ, ಬಸವರಾಜ ಗೋಣಿ , ಕಾಶೀಬಾಯಿ, ಶೈಲಜಾ ನಾಕೇದಾರ, ಜ್ಯೋತಿ ಪಾಟೀಲ, ಅನೀತಾ ಪಾಟೀಲ, ಪ್ರೀಯಾ ನಿಗ್ಗುಡಗಿ ಮತ್ತು ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಶಿಕ್ಷಣ ವಿಭಾಗದ ಉಪನ್ಯಾಸಕರಾದ ಕಾಶೀಬಾಯಿ ಬೋಗಶೆಟ್ಟಿ ಅವರು ಸ್ವಾಗತಿಸಿದರು , ಕನ್ನಡ ವಿಭಾಗದ ಉಪನ್ಯಾಸಕರಾದ ಶ್ರೀ ಗೋಣಿ ಬಸವರಾಜ ಅವರು ವಂದಿಸಿದರು ಎಂದು ಪತ್ರಿಕಾ ಪ್ರಕಟಣೆಗಾಗಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಮೋಹನರಾಜ ಪತ್ತಾರ ಅವರು ತಿಳಿಸಿದ್ದಾರೆ.