ವಿವಿಧ ಇಲಾಖೆಗಳ 34863 ಹುದ್ದೆಗಳ ಭರ್ತಿಗೆ ಸಿದ್ಧತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿವಿಧ ಇಲಾಖೆಗಳ 34863  ಹುದ್ದೆಗಳ ಭರ್ತಿಗೆ ಸಿದ್ಧತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿವಿಧ ಇಲಾಖೆಗಳ 34863 ಹುದ್ದೆಗಳ ಭರ್ತಿಗೆ ಸಿದ್ಧತೆ: ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಸುಮಾರು 34,863 ಕ್ಕೂ ಹೆಚ್ಚಿನ ಹುದ್ದೆಗಳನ್ನು ಭರ್ತಿ ಮಾಡಲು ಕಾಲಮಿತಿಯನ್ನು ವಿಧಿಸಿ ನೇಮಕಾತಿಯನ್ನು ಕೈಗೊಳ್ಳಲು ಅಗತ್ಯ ಸೇವೆಗಳ ಇಲಾಖಾವಾರು ನೇಮಕಕ್ಕೆ ಅಣಿಯಾಗಬೆಕೇಂದು ನೇಮಕಾತಿ ಪ್ರಾಧಿಕಾರಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

 ರಾಜ್ಯ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ಕೈಗೊಂಡ ಅವರು, 371 (ಜೆ) ಕಲಂ ತಿದ್ದುಪಡಿಗೆ ಅನುಗುಣವಾಗಿ ಕಲ್ಯಾಣ ಕರ್ನಾಟಕದ ಸ್ಥಳೀಯರಿಗೆ ಮೀಸಲಿಟ್ಟಿರುವ ನೇರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡುವ ಕುರಿತು 2023ರಲ್ಲಿ ಹೊರಡಿಸಿರುವ ಸುತ್ತೋಲೆಯನ್ನು ಅನುಸರಿಸುವ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಆಮೂಲಾಗ್ರ ಪರಿವರ್ತನೆ ತರುವ ಮೂಲಕ ಕೇಂದ್ರ ಲೋಕಸೇವಾ ಆಯೋಗದ ಮಾದರಿಯಲ್ಲಿಯೇ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ರಾಜ್ಯದಲ್ಲಿಯೂ ಜಾರಿಗೊಳಿಸುವ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ನೇಮಕಾತಿ ಪ್ರಕ್ರಿಯೆಯ ಸುಧಾರಣೆಯ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಕಳೆದ ವಾರ ಎಲ್ಲ ನೇಮಕಾತಿ ಪ್ರಾಧಿಕಾರಗಳ ಸಭೆಯನ್ನು ನಡೆಸಲಾಗಿದೆ. ಆ ಸಭೆಯಲ್ಲಿ ತೆಗೆದುಕೊಂಡ ಶಿಫಾರಸುಗಳನ್ನು ಪರಿಶೀಲಿಸಿ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಬೇಕು. ಕೇರಳ ರಾಜ್ಯದ ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲು ಅಲ್ಲಿಗೆ ಭೇಟಿ ನೀಡಿ ಎಲ್ಲವನ್ನೂ ಪರಿಶೀಲನೆ ಮಾಡಲು ಸಂಬಂಧ ಪಟ್ಟವರಿಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ 41 ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಯಾಗದೆ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿದೆ. 

ಅನೇಕ ಇಲಾಖೆಗಳಲ್ಲಿ ಹಲವಾರು ದಶಕಗಳಿಂದ ವೃಂದ ಮತ್ತು ನೇಮಕಾತಿಗೆ ತಿದ್ದುಪಡಿಯಾಗಿರಲಿಲ್ಲ.

ಆದ್ದರಿಂದ ಎಲ್ಲಾ ಇಲಾಖೆಗಳಿಗೆ ಅನುಕೂಲವಾಗುವಂತಹ ಮಾದರಿಯಲ್ಲಿಯೇ ವೃಂದ ಮತ್ತು ನೇಮಕಾತಿ ನಡೆಸಲು ನಿರ್ದೇಶನ ನೀಡಿದ್ದಾರೆ. 

ಕೇಂದ್ರ ಲೋಕಸೇವಾ 

ಆಯೋಗದಲ್ಲಿ ಕೇವಲ ಸಮೂಹ ಎ ಮತ್ತು ಬಿ ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಸಲಾಗುತ್ತದೆ. ಇದೇ ಮಾದರಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ಕೇವಲ ಸಮೂಹ ಎ ಮತ್ತು ಬಿ ಹುದ್ದೆಗಳಿಗೆ ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸಿ, ಸಮೂಹ ಸಿ ವೃಂದದ ನೇಮಕಾತಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಲು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ವಿಶ್ವಾಸನೀಯ ಮೂಲಗಳು ಖಚಿತ ಪಡಿಸಿವೆ.  

371 (ಜೆ) ಗೆ ಸಂಬಂಧಿಸಿದಂತೆ ನಮ್ಮ ಮನವಿಯನ್ನು ಮುಖ್ಯಮಂತ್ರಿಗಳು ಪುರಸ್ಕರಿಸಿದ್ದು, 2023 ಫೆಬ್ರವರಿ 1ರ ಪ್ರಕಾರ ನೇಮಕಾತಿ ನಡೆಯಲಿದೆ. ಇದರಿಂದ ನಮ್ಮ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗಲಿದೆ. ಇದಲ್ಲದೆ 

ಪಿಎಸ್‌ಐ ನೇಮಕಾತಿಯಲ್ಲಿ ಮೊದಲು ದೈಹಿಕ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಅಬಕಾರಿ ಇಲಾಖೆಯ ನೇಮಕಾತಿಯಲ್ಲಿ ಲಿಖಿತ ಪರೀಕ್ಷೆಯನ್ನು ಮೊದಲು ಕೈಗೊಳ್ಳಲಾಗುತ್ತದೆ. ಆದ್ದರಿಂದ ಅಬಕಾರಿ ಇಲಾಖೆ ಮಾದರಿಯನ್ನು ಪಿಎಸ್‌ಐ ನೇಮಕಾತಿಯಲ್ಲೂ ಅಳವಡಿಸಿಕೊಳ್ಳುವ ಕುರಿತು ಪರಿಶೀಲಿಸಲಾಗುವುದು.

 ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರವು ಯುವಜನತೆಗೆ ಉದ್ಯೋಗ ನೀಡುವುದಕ್ಕೆ ಸಂಪೂರ್ಣ ಬದ್ದವಾಗಿದ್ದು, ಅತಿ ಶೀಘ್ರದಲ್ಲಿಯೇ ಉಳಿಕೆ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಡಾ ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಈ ಎಲ್ಲ ನೇಮಕಾತಿಗಳ ಭರ್ತಿಗೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸಚಿವ ಡಾ ಶರಣಪ್ರಕಾಶ್ ಪಾಟೀಲ್ ವಿಶೇಷ ಆಸ್ಥೆ ವಹಿಸಿರುವುದು ಈ ಭಾಗದ ಜನತೆಯ ಮೆಚ್ಚುಗೆ ಪಾತ್ರವಾಗುತ್ತಿದೆ.