ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ : ಆರ್. ಕೆ.ಪಾಟೀಲ

ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ  : ಆರ್. ಕೆ.ಪಾಟೀಲ

ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ : ಆರ್. ಕೆ.ಪಾಟೀಲ 

ಕಲಬುರಗಿ : ಪರಿಸರ ಮಾಲಿನ್ಯ ಕಡಿಮೆ ಮಾಡಲು ಮನೆಗೊಂದು ಸಸಿ ನೆಟ್ಟು ಪರಿಸರ ಉಳಿಸಿ ಎಂದು ಸ್ವತಃ ಸಸಿ ನೆಟ್ಟು ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ವನಮಹೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿ ಎಂದು ಕಲ್ಬುರ್ಗಿ ಬೀದರ್ ಹಾಗೂ ಯಾದಗೀರ ಹಾಲು ಒಕ್ಕೂಟದ ಅಧ್ಯಕ್ಷರಾದ ಆರ್ ಕೆ ಪಾಟೀಲ್ ಅವರು ಹೇಳಿದರು.

ಸಿದ್ದಲಿಂಗೇಶ್ವರ ಪ್ರಕಾಶನದ ವತಿಯಿಂದ ವೈಜಾಪುರ ಗ್ರಾಮದಲ್ಲಿ ಆಯೋಜಿಸಿದ್ದ ವನಮಹೋತ್ಸವ ಅಂಗವಾಗಿ ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ ಮಾತನಾಡಿದರು.

ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆಯಾಗಿದೆ. ಪರಿಸರದಲ್ಲಿನ ಗಾಳಿ, ನೀರು, ಮಣ್ಣು, ಮರಗಳು, ಕಾಡುಗಳು, ಸಾಗರಗಳು ಇತ್ಯಾದಿಗಳು ಎಂದೆಂದಿಗೂ ಉಳಿಯುವುದು ಬಹಳ ಮುಖ್ಯ. ನಾವು ಅವಲಂಬಿತರಾಗಿರುವ ಈ ಪರಿಸರ ಯುಗ ಯುಗ ಗಳವರೆಗೂ ಹೀಗೆಯೂ ಉಳಿಯಬೇಕಿದೆ.

ಬೇಸರವೆಂದರೆ ನಾವು ಮಾಡುತ್ತಿರುವ ಅರಣ್ಯನಾಶ, ಗಣಿಗಾರಿಕೆ, ಕೈಗಾರಿಕೀಕರಣ ಸೇರಿದಂತೆ ಹಲವಾರು ಮಾನವ ಚಟುವಟಿಕೆಗಳಿಂದ ಪರಿಸರವು ಇಂದು ಬಹಳ ಹಾನಿಗೊಳಗಾಗುತ್ತಿದೆ. ಪರಿಸರದೊಂದಿಗೆ ಮಾನವನ ಹಸ್ತಕ್ಷೇಪದಿಂದಾಗಿ ಈ ಹಾನಿಯನ್ನು ಕಡಿಮೆ ಮಾಡುವುದು ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ವಿಶ್ವಸಂಸ್ಥೆಯು ವಿಶ್ವ ಪರಿಸರ ದಿನವನ್ನು ಆಚರಿಸುವ ಯೋಚನೆಯೊಂದಿಗೆ ಬಂದಿತು. ಪರಿಸರ ಸಂರಕ್ಷಣೆಗೆ ಯುವಕರನ್ನು ಉತ್ತೇಜಿಸುವ ಸಲುವಾಗಿ ಈ ದಿನವನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಚಿತ್ರಕಲೆ ಸ್ಪರ್ಧೆಗಳು, ರಸಪ್ರಶ್ನೆ ಸ್ಪರ್ಧೆಗಳು, ಕಲಾ ಪ್ರದರ್ಶನಗಳು, ಪ್ರಬಂಧ ಬರವಣಿಗೆ, ಭಾಷಣ ಇತ್ಯಾದಿ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುತ್ತದೆ. ಸಿದ್ದಲಿಂಗೇಶ್ವರ ಪ್ರಕಾಶದ ಇಂತಹ ವನ ಮಹೋತ್ಸವ ಕಾರ್ಯಕ್ರಮ ನಿತ್ಯ ನಿರಂತರ ನಡೆಯಬೇಕು ಎಂದರು.

 ಸಿದ್ದಲಿಂಗೇಶ್ವರ ಪ್ರಕಾಶನದ ಪ್ರಕಾಶಕ ಬಸವರಾಜ ಕೊನೇಕ್, ಸಿದ್ದಲಿಂಗ ಕೊನೇಕ್, ಸ್ಥಳೀಯ ಮುಖಂಡರಾದ ಚಂದ್ರಕಾಂತ್ ರೆಡ್ಡಿ, ವೇಣುಗೋಪಾಲ್ ಹಾದಿಮನಿ,ಸಿದ್ದರಾಮ ಹಾದಿಮನಿ,ಮಲ್ಲಿನಾಥ ಬಿರಾದರ,ಸಿದ್ದೇಶ್ ಕಣ್ಣಿ, ಅಣ್ಣಪ್ಪ ಜಮಾದಾರ, ಶ್ರೀಕಾಂತ್ ಗಾಯಕ್ವಾಡ,ಸತೀಶ್ ಬನಶೆಟ್ಟಿ,ನೀಲಕಂಠರಾವ ಪಾಟೀಲ, ಮುಂತಾದವರು ಉಪಸ್ಥಿತರಿದ್ದರು.