ಗೊ.ರು.ಚ ಅವರಿಗೆ ತೋಂಟದ ಮಠದಿಂದ ರಾಷ್ಟ್ರೀಯ ಪ್ರಶಸ್ತಿ
ಗೊ.ರು.ಚ ಅವರಿಗೆ ತೋಂಟದ ಮಠದಿಂದ ರಾಷ್ಟ್ರೀಯ ಪ್ರಶಸ್ತಿ
ಗದಗ: ತೋಂಟದ ಸಿದ್ಧಲಿಂಗ ಶ್ರೀಗಳ ಸ್ಮರಣಾರ್ಥ ನೀಡುವ 'ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ'ಗೆ ಶರಣ ಸಾಹಿತಿ ಗೊ.ರು.ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತೋಂಟದಾರ್ಯ ಸಂಸ್ಥೆಯ ಆಡಳಿತಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ ತಿಳಿಸಿದ್ದಾರೆ.
ಗೊ.ರು. ಚನ್ನಪಸಪ್ಪನವರು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾಗಿ ಮತ್ತು ಅಧ್ಯಕ್ಷರಾಗಿ ,ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.ಭಾರತದಲ್ಲಿಯೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾನಪದ ವಿಶ್ವವಿದ್ಯಾಲಯವನ್ನು ಸ್ಥಾಪಿಸುವಲ್ಲಿ ಅವರ ಪಾತ್ರ ಹಿರಿದು,
ಮಹಾದೇವಿ, ಸದಾಶಿವ ಶಿವಾಚಾರ್ಯ, ಕುನಾಲ ,ಕರ್ನಾಟಕ , ಚೆಲುವಾಂಬಿಕೆ ,ಪ್ರಗತಿಪಥ,ಸಾಕ್ಷಿ ಕಲ್ಲು, ಬೆಳ್ಳಕ್ಕಿ ಹಿಂಡು ಬೆದರ್ಯಾವೊ, ಬಾಗೂರು ನಾಗಮ್ಮ, ಗ್ರಾಮ ಗೀತೆಗಳು, ವಿಭೂತಿ, ಕರ್ನಾಟಕ ಜನಪದ ಕಲೆಗಳು ಗೊ.ರು. ಚೆನ್ನಬಸಪ್ಪನವರ ಪ್ರಮುಖ ಬರಹಗಳಾಗಿವೆ.
ಇಂಥಹ ಮಹಾನ್ ಚಿಂತಕ, ಕನ್ನಡ ನಾಡಿಗೆ ವಿವಿಧ ನೆಲೆಗಳಲ್ಲಿ ಮಹತ್ವದ ಸೇವೆ ಸಲ್ಲಿಸಿರುವ ಗೊ.ರು. ಚನ್ನಬಸಪಸಪ್ಪನವರಿಗೆ ಅಗಸ್ಟ್ 14 ರಂದು ಗದಗ ನಗರದ ತೋಂಟದಾರ್ಯ ಶ್ರೀ ಮಠದಲ್ಲಿ ನಡೆಯುವ ಸಿದ್ಧಲಿಂಗ ಸ್ವಾಮೀಜಿಯವರ ೬ ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು, ಅಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಪ್ರಶಸ್ತಿಯು .5 ಲಕ್ಷ ರೂಪಾಯಿ ನಗದು, ಫಲಕ ಒಳಗೊಂಡಿದೆ' ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.