ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿಗೆ ಡಾ.ನಾಗೇಂದ್ರಪ್ಪ ಆಯ್ಕೆ

ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿಗೆ ಡಾ.ನಾಗೇಂದ್ರಪ್ಪ ಆಯ್ಕೆ

ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿಗೆ ಡಾ.ನಾಗೇಂದ್ರಪ್ಪ ಆಯ್ಕೆ

ಕಲಬುರಗಿ: ದಾವಣಗೆರೆಯ ಕಲಾಕುಂಚ ಸಾಂಸ್ಕೃಇಕ ಸಂಸ್ಥೆಯು ಕರ್ನಾಟಕದ ೭೭ ನೇ ರಾಜ್ಯೋತ್ಸವ ಸುಸಂದರ್ಭದಲ್ಲಿ ಕೊಡಮಾಡುವ "ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ ಡಾ.ನಾಗೇಂದ್ರಪ್ಪ ಶಿವಶರಣಪ್ಪ ಅವರನ್ನು ಆಯ್ಕೆ‌ಮಾಡಲಾಗಿದೆ ಎಂದು ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ ಶೆಣೈ ,ಅಧ್ಯಕ್ಷ ಕೆ.ಎಚ್.ಮಂಜುನಾಥ,ಪ್ರಧಾನ ಕಾರ್ಯದರ್ಶಿ ಉಮೇಶ ಕೆ.ಸಿ.ತಿಳಿಸಿದ್ದಾರೆ.

       ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,೭೭ನೇ ವರ್ಷದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ನಾಡು, ನುಡಿ, ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ, ಜಾನಪದ, ಸಮಾಜಸೇವೆ, ಸಂಘಟನೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಅವರನ್ನು "ಕರ್ನಾಟಕ ಮುಕುಟಮಣಿ" ರಾಜ್ಯಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅವರು ಹೇಳಿದರು. ದಿನಾಂಕ 01 ರಂದು ಭಾನುವಾರ ದಾವಣಗೆರೆ ರೈಲ್ವೇ ನಿಲ್ದಾಣದ ರಸ್ತೆಯಲ್ಲಿರುವ ಚನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ ವಿಜೃಂಭಣೆಯಿಂದ ಪ್ರಶಸ್ತಿ ಪ್ರದಾನ ಮಾಡಲಾಗುವುದು ದಾವಣಗೆರೆಯ‌ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರು,ಅಧ್ಯಕ್ಷರು,ಪ್ರಧಾನ ಕಾರ್ಯದರ್ಶಿಗಳು, ಸರ್ವ ಸದಸ್ಯರು ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.