ಪರಿಸರ ಸಂರಕ್ಷಣೆ ತೊಡಗಿಸಿಕೊಂಡ ವ್ಯಕ್ತಿಗಳಿಗೆ ಪ್ರಶಸ್ತಿ ಪ್ರದಾನ.

ಪರಿಸರ ಸಂರಕ್ಷಣೆ ತೊಡಗಿಸಿಕೊಂಡ ವ್ಯಕ್ತಿಗಳಿಗೆ ಪ್ರಶಸ್ತಿ ಪ್ರದಾನ.

ಪರಿಸರ ಸಂರಕ್ಷಣೆ ತೊಡಗಿಸಿಕೊಂಡ ವ್ಯಕ್ತಿಗಳಿಗೆ ಪ್ರಶಸ್ತಿ ಪ್ರದಾನ.

ಬೀದರ : ಪರಿಸರ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ದುಡಿಯುತ್ತಿರುವ ಪರಿಸರ ಸಂರಕ್ಷಕರನ್ನು ಹಾಗೂ ಪರಿಸರ ಸಂರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಕಲ್ಯಾಣ ಕರ್ನಾಟಕ ಭಾಗದ ನಿಸ್ವಾರ್ಥ ಸೇವಕರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡಲಾಗುತ್ತದೆ ಎಂದು ಬಾಪು ರೋರರ್ ಡೆವಲಪ್ಮೆಂಟ್ ಸೊಸೈಟಿ ಬೀದರ 

ಅಧ್ಯಕ್ಷರಾದ ಕಾಶಿನಾಥ ಪಾಟೀಲ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪರಿಸರ ಸಂರಕ್ಷಣೆ ಕ್ಷೇತ್ರದಲ್ಲಿ ಹಗಲಿರುಳು ಶ್ರಮಿಸುತ್ತಿರುವ ವ್ಯಕ್ತಿಗಳಿಗೆ ನಮ್ಮ ಸಂಸ್ಥೆಯ ವತಿಯಿಂದ ನವೆಂಬರ್ ತಿಂಗಳ ಒಂಭತ್ತನೇ ತಾರೀಖಿನಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.

ಹೆಚ್ಚಿನ ಮಾಹಿತಿಗಾಗಿ ಈ ನಂಬರಿಗೆ 9341723204,9663809340 ಸಂಪರ್ಕಿಸಲು ಕೋರಲಾಗಿದೆ.ಈ ಸಂದರ್ಭದಲ್ಲಿ ಸಂಗಮೇಶ ಎನ್ ಜಾವಾದಿ ಸೇರಿದಂತೆ ಅನೇಕ ಪದಾಧಿಕಾರಿಗಳು ಉಪಸ್ಥಿತರಿದ್ದರು.