ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಗಳಿಗೆ ರಮೇಶ್ ಸಂಗಾ ಶುಭ ಕೋರಿದರು

ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಗಳಿಗೆ ರಮೇಶ್ ಸಂಗಾ ಶುಭ ಕೋರಿದರು

ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಚಿವಾಲಯ ನೌಕರರ ಸಂಘದಿಂದ ಅಭಿನಂದನೆ

ಕಲಬುರಗಿ: ಬೆಂಗಳೂರಿನಲ್ಲಿ

ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಗಳಾಗಿ ನೇಮಕವಾಗಿರುವ ಶಾಲಿನಿ ರಜನೀಶ್ ಅವರಿಗೆ ಸಮಸ್ತ ಸಚಿವಾಲಯ ನೌಕರರ ಪರವಾಗಿ ಸಂಘದಿಂದ ಅಭಿನಂದಿಸಿ ಸನ್ಮಾನಿಸಲಾಯಿತು.

ಗುರುವಾರ ಬೆಂಗಳೂರಿನ ಮುಖ್ಯ ಕಾರ್ಯದರ್ಶಿ ಕಚೇರಿಯಲ್ಲಿ

ಸಂಘದ ಅಧ್ಯಕ್ಷರಾದ ರಮೇಶ್ ಸಂಗಾ ಮತ್ತು ಪದಾಧಿಕಾರಿಗಳ ನಿಯೋಗವು ಸರಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿ ನೌಕರರ ಅನೇಕ ಬೇಡಿಕೆಗಳನ್ನು ಈಡೇರಿಸಲು ಮನವಿ ಮಾಡಿಕೊಳ್ಳಲಾಯಿತು.

ಅಭಿನಂದನೆ ಸ್ವೀಕರಿಸಿದ ಮುಖ್ಯ ಕಾರ್ಯದರ್ಶಿ ಅವರು, ಸಮಸ್ತ ಸರ್ಕಾರಿ ನೌಕರರ ಬೇಡಿಕೆಗಳಿಗೆ ಪೂರಕವಾಗಿ ಸ್ಪಂದಿಸುವ ಭರವಸೆ ನೀಡಿದರು.

JCM ಸಮಿತಿ ಸಭೆಯ ನಿರ್ಣಯಗಳ ಬಗ್ಗೆ ಮಾತನಾಡಿ, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿ, ಸರ್ಕಾರಿ ವಸತಿ ಗೃಹಗಳ ನಿರ್ಮಾಣ, ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ಖಾಲಿಹುದ್ದೆಗಳ ನೇಮಕಾತಿ, ಮುಂಬಡ್ತಿ ಮೊದಲಾದ ವಿಷಯಗಳಿಗೆ ಸಂಬಂಧಿಸಿದಂತೆ ತುರ್ತಾಗಿ ಕ್ರಮವಹಿಸುವ ಭರವಸೆ ನೀಡಿದ್ದಾರೆ ಎಂದು ಸಂಘದ ಅಧ್ಯಕ್ಷರಾದ ರಮೇಶ್ ಸಂಗಾ ತಿಳಿಸಿದ್ದಾರೆ.