ರಾಜ್ಯ ಮಟ್ಟದ ಪಿಯು ಕಾಲೇಜುಗಳ ಬಾಸ್ಕೇಟ್‌ಬಾಲ್ ಪಂದ್ಯಾವಳಿಗೆ ಚಾಲನೆ
ರಾಜ್ಯ ಮಟ್ಟದ ಪಿಯು ಕಾಲೇಜುಗಳ ಬಾಸ್ಕೇಟ್‌ಬಾಲ್ ಪಂದ್ಯಾವಳಿಗೆ ಚಾಲನೆ
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ)ಯ ಪಿಯು ಕಾಲೇಜುಗಳ ರಾಜ್ಯ ಮಟ್ಟದ ಬಾಸ್ಕೇಟ್‌ಬಾಲ್ ಪಂದ್ಯಾವಳಿಗಳಿಗೆ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಸೋಮವಾರ ಜರುಗಿದ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಬಿ.ಫೌಜೀಯಾ ಜರನ್ನುಮ್ ಚಾಲನೆ ನೀಡಿದರು.
ಡಿಡಿಪಿಯು ಶಿವಶರಣಪ್ಪ ಮೂಳೆಗಾಂವ ಅವರು ಇಲಾಖೆಯ ವತಿಯಿಂದ ಗ್ರಂಥ ಸಮರ್ಪಿಸಿ ಜಿಲ್ಲಾಧಿಕಾರಿಯವರನ್ನು ಸ್ವಾಗತಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್ ಹಾಗೂ ಜಿಲ್ಲೆಯ ವಿವಿಧ ಪಿಯು ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರು, ರಾಜ್ಯದ ವಿವಿಧ ಜಿಲ್ಲೆಗಳ ಬಾಸ್ಕೇಟ್‌ಬಾಲ್ ತಂಡಗಳ ಕೋಚ್, ವ್ಯವಸ್ಥಾಪಕರು, ಕ್ರೀಡಾಪಟುಗಳು ಭಾಗವಹಿಸಿದ್ದರು ಕಾರ್ಯಕ್ರಮ ಯಶಸ್ವಿಗೊಂಡಿತು.
.