ಕಲಬುರ್ಗಿಯಲ್ಲಿ ಪೊಲೀಸ್ ಹುತಾತ್ಮರ ದಿನ

ಕಲಬುರ್ಗಿಯಲ್ಲಿ ಪೊಲೀಸ್ ಹುತಾತ್ಮರ ದಿನ

ಕಲಬುರಗಿ : ನಗರದ ಪೊಲೀಸ್‌ ಆಯುಕ್ತರ ಕಚೇರಿಯ ಸಹಯೋಗದಲ್ಲಿ ನಗರದ ಡಿಎ.ಆರ್.ಪರೇಡ ಮೈದಾನದಲ್ಲಿ  ಪೊಲೀಸ್ ಹುತಾತ್ಮರ ದಿನ ಆಚರಿಸಲಾಯಿತು.

ಕಲಬುರಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಸ್. ನಾಗಶ್ರೀ, ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ವಿ.ವಿ, ಐಜಿಪಿ ಅಜಯ್ ಹಿಲೋರಿ, ಪೊಲೀಸ್ ಕಮೀಷನರ್ ಡಾ. ಶರಣಪ್ಪ ಎಸ್.ಡಿ, ಎಸ್ಪಿ ಅಡ್ಡೂರು ಶ್ರೀನಿವಾಸುಲು ಅವರು ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.

ಪೊಲೀಸ್‌ ಶಸ್ತ್ರಪಡೆಯ ಸಿಬ್ಬಂದಿಗಳು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಪೊಲೀಸ್ ಹುತಾತ್ಮರಿಗೆ ಗೌರವ ಸಲ್ಲಿಸಿದರು

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಪೊಲೀಸ್‌ ಹುತಾತ್ಮರ ಸ್ಮಾರಕಕ್ಕೆ ಗಣ್ಯರು ಪುಷ್ಪಗುಚ್ಛವಿರಿಸಿ ಶ್ರದ್ದಾಂಜಲಿ ಅರ್ಪಿಸಿದರು.

ನಂತರ ಪೊಲೀಸ್‌ ಧ್ವಜ ಅರ್ಧಕ್ಕೆ ಇಳಿಸಿ ಎರಡು ನಿಮಿಷ ಮೌನ ಆಚರಿಸಲಾಯಿತು.

ದೇಶಕ್ಕಾಗಿ ಸೇವೆ ಸಲ್ಲಿಸಿದ ಈ ದಿನವನ್ನು ಪೊಲೀಸ್ ಹುತಾತ್ಮರ ದಿನ ಎಂದೂ ಕರೆಯುತ್ತಾರೆ.

 ಕರ್ತವ್ಯದಲ್ಲಿ ಇದ್ದಾಗ ಮಡಿದ ಪೊಲೀಸರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ. ಈ ದಿನವು ಪೊಲೀಸರ ತ್ಯಾಗವನ್ನು ಸ್ಮರಿಸಿ ಗೌರವಿಸಲಾಗುತ್ತದೆ .

 ಹಗಲು, ರಾತ್ರಿ ಮಳೆ ಚಳಿ ಎನ್ನದೆ ಪೊಲೀಸರು 24 ಗಂಟೆವರೆಗೆ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಾರೆ.ಜನರಿಗಾಗಿ ಜೀವಿಸುವ ಪೊಲೀಸರಿಗೆ ಸಹಾನುಭೂತಿ, ಗೌರವ ಸೂಚಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ .

ಈ ಸಂದರ್ಭದಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.