ಅದ್ದೂರಿಯಾಗಿ ನಾಡು-ನುಡಿ ಕಾರ್ಯಕ್ರಮಗಳ ಆಯೋಜನೆಗೆ ಡಿ.ಸಿ ಸೂಚನೆ

ಅದ್ದೂರಿಯಾಗಿ ನಾಡು-ನುಡಿ ಕಾರ್ಯಕ್ರಮಗಳ ಆಯೋಜನೆಗೆ ಡಿ.ಸಿ ಸೂಚನೆ

ಸಂಭ್ರಮದ ರಾಜ್ಯೋತ್ಸವ ದಿನಾಚರಣೆಗೆ ನಿರ್ಧಾರ:

ಅದ್ದೂರಿಯಾಗಿ ನಾಡು-ನುಡಿ ಕಾರ್ಯಕ್ರಮಗಳ ಆಯೋಜನೆಗೆ ಡಿ.ಸಿ ಸೂಚನೆ

ಕಲಬುರಗಿ : ನಳ ನವೆಂಬರ್ 1 ರಂದು 69 ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯನ್ನು ಕಲಬುರಗಿ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಬೇಕು 

 ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಪೂರ್ವಭಾವಿ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಅವರು ಅಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ನಗರದ ಎಪಿಎಂಸಿ ಆವರಣದ ನಗರೇಶ್ವರ ಶಾಲೆಯಲ್ಲಿ ಶಿಷ್ಠಾಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರು ನಾಡ ದೇವತೆ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸುವರು. ನಂತರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮ ನಡೆಯುವ ನಗರೇಶ್ವರ ಶಾಲೆ ಸ್ಥಳ ಮತ್ತು ಸುತ್ತಮುತ್ತ ಸಂಪೂರ್ಣ ಸ್ವಚ್ಛತೆ, ನೈರ್ಮಲ್ಯ ಕಾಪಾಡಬೇಕು. ಕಾರ್ಯಕ್ರಮಕ್ಕೆ ವಿದ್ಯುತ್ ಅಡೆತಡೆಯಾಗದಂತೆ ಎಚ್ಚರ ವಹಿಸಬೇಕು. ಕಾರ್ಯಕ್ರಮಕ್ಕೆ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಬೇಕು ಎಂದ ಅವರು, ಖಾಸಗಿ ಸಂಘ-ಸಂಸ್ಥೆಗಳು, ವಾಣಿಜ್ಯ-ಅಂಗಡಿ ಮುಂಗಟ್ಟುಗಳು ಸಹ ಸಂಭ್ರಮದಿಂದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಹೆಚ್.ಕೆ.ಸಿ.ಸಿ.ಐ. ಸಂಸ್ಥೆಗೆ ಪತ್ರ ಬರೆಯಿರಿ ಎಂದು ಹೇಳಿದರು.

ಇನ್ನು ತಾಲೂಕಾ ಮಟ್ಟದಲ್ಲಿ ತಹಶೀಲ್ದಾರರು ಕ್ನನಡಪರ ಸಂಘನೆಗಳು, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳೊಂದಿಗೆ ಪೂರ್ವಬಾವಿ ಸಭೆ ನಡೆಸಿ ರಾಜ್ಯೋತ್ಸವ ಕಾರ್ಯಕ್ರಮ ಅರ್ಥಪೂರ್ಣ ಆಚರಣೆ ಮಾಡಬೇಕು. ಯಾವುದೇ ಲೋಪಕ್ಕೆ ಅವಕಾಶ ನೀಡಬಾರದು ಎಂದ ಅವರು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳಲ್ಲಿ ರಾಜ್ಯೋತ್ಸವ ದಿನಾಚರಣೆ ಸಂಭ್ರಮದಿಂದ ಆಯೋಜಿಸುವಂತೆ ತಿಳಿಸಿದರು.

ರಾಜ್ಯೋತ್ಸವ ಪ್ರಯುಕ್ತ  ನಗರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್, ಜಗಜ್ಯೋತಿ ಬಸವೇಶ್ವರ, ಸರ್ದಾರ್ ವಲ್ಲಭಭಾಯಿ ಪಟೇಲ್, ಡಾ.ಬಾಬು ಜಗಜೀವನರಾಂ ಪ್ರತಿಮೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ, ಡಾ.ಎಸ್.ಎಂ.ಪಂಡಿತ ರಂಗಮಂದಿರ, ಮಹಾನಗರ ಪಾಲಿಕೆ, ನಗರೇಶ್ವರ ಶಾಲೆಗೆ ವಿಶೇಷ ದೀಪಾಲಂಕಾರದ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಡಿ.ಸಿ. ಸೂಚಿಸಿದರು.

ಭವ್ಯ ಮೆರವಣಿಗೆ:

ನಗರೇಶ್ವರ ಶಾಲಾಆವರಣದಿಂದ ಯಿಂದ  ಕಲಾ ತಂಡಗಳ ಭವ್ಯ ಪ್ರದರ್ಶನಕ್ಕೆ ಚಾಲನೆ ನೀಡಲಾಗುತ್ತಿದ್ದು, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಇದಲ್ಲದೆ ವಿವಿಧ ಇಲಾಖೆಯಿಂದ ಸರ್ಕಾರದ ಜನಪರ ಸಾಧನೆಯ ಸ್ಥಬ್ದಚಿತ್ರ ಪ್ರದರ್ಶನ ಸಹ ಏರ್ಪಡಿಸುವಂತೆ ಡಿ.ಸಿ ಅವರು ವಿವಿಧ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ  ಮಾತನಾಡಿ, ರಾಜ್ಯೋತ್ಸವ ದಿನದಂದು ನಾಡು-ನುಡಿಗೆ ಶ್ರಮಿಸಿದ ಹಿರಿಯ ಕವಿಗಳು, ಸಾಹಿತಿಗಳು, ಕನ್ನಡ ಪರ ಹೋರಾಟಗಾರರನ್ನು ಜಿಲ್ಲಾ ಆಡಳಿತದಿಂದ ಗುರುತಿಸಿ ಗೌರವಿಸಬೇಕು  ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್, ಸಹಾಯಕ ಆಯುಕ್ತೆ ಸಾಹಿತ್ಯ, ಹೆಚ್ಚುವರಿ ಎಸ್.ಪಿ ಶ್ರೀನಿಧಿ, ಡಿ.ಸಿ.ಪಿ ಪ್ರವೀಣ ಎಚ್. ನಾಯಕ್ ಸೇರಿದಂತೆ ಕ್ನನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಇತರೆ ಅಧಿಕಾರಿಗಳಿದ್ದರು.