ರಕ್ತದಾನ ಮಹಾದಾನ ಡಾ ಮಹಾದೇವಪ್ಪ ರಾಂಪೂರೆ
ರಕ್ತದಾನ ಮಹಾದಾನ ಡಾ ಮಹಾದೇವಪ್ಪ ರಾಂಪೂರೆ
ರಕ್ತದಾನ ಮಹಾದಾನ. ಇದರಿಂದ ಒಂದು ಜೀವ ಉಳಿಯಲು ಸಾಧ್ಯ. ರಕ್ತದಾನದಿಂದ ಯಾವುದೇ ತೊಂದರೆ ಇಲ್ಲ. ಆರೋಗ್ಯ ಚೇತರಿಕೆಗೆ ಸಾಧ್ಯ. ಯುವ ಜನತೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗುವಂತೆ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಸಂಸ್ಥೆಯ ಪಾಲಿಟೆಕ್ನಿಕ್ ಕಾಲೇಜಿನ ಸಂಯೋಜಕರು ಆಗಿರುವ ಡಾ ಮಹಾದೇವಪ್ಪ ರಾಂಪೂರೆ ಹೇಳಿದರು.
ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ರಕ್ತದಾನದ ಅರಿವು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು.
ಅರಿವು ಅಗತ್ಯ: ಆರೋಗ್ಯವಂತ ಯುವಕರು ಪ್ರತಿ 3 ತಿಂಗಳಿಗೊಮ್ಮೆ ರಕ್ತದಾನ ಮಾಡಬಹದು. ಇದರಿಂದ ಆರೋಗ್ಯದ ಮೇಲೆ ಯಾವುದೇ ತೊಂದರೆಯಾಗದೆ ಹೊಸ ಚೇತನವನ್ನು ಹೊಂದಲು ಸಾಧ್ಯ.
ಯುವಕರ ರಕ್ತದಲ್ಲಿ ಹೆಚ್ಚು ಪೌಷ್ಟಿಕತೆ ಇರುವುದರಿಂದ ಇದನ್ನು ಹೆಚ್ಚು ಕಾಲ ಶೇಖರಿಸಿಟ್ಟು ಅಗತ್ಯತೆಗೆ ಅನುಗುಣವಾಗಿ ಬಳಸುವುದರಿಂದ ರಕ್ತದ ಅವಶ್ಯಕತೆ ಇರುವವರಿಗೆ ಸಹಾಯ ಮಾಡಿದಂತಾಗುತ್ತದೆ. ಯುವಕರಲ್ಲಿ ರಕ್ತದಾನದ ಬಗ್ಗೆ ಹೆಚ್ಚು ಅರಿವು ಮೂಡಿಸಲು ಹಾಗೂ ಸ್ವಯಂ ಪ್ರೇರಿತ ರಕ್ತ ದಾನಿಗಳಿಗೆ ಕೃತಜ್ಞತೆ ಸಲ್ಲಿಸುವುದು ಇಂದಿನ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
'ಹದಿನೆಂಟು ವರ್ಷ ಮೇಲ್ಪಟ್ಟ ಆರೋಗ್ಯವಂತರು ಕನಿಷ್ಠ ವರ್ಷಕ್ಕೆ ಎರಡು ಬಾರಿಯಾದರೂ ರಕ್ತದಾನ ಮಾಡಿದರೆ ರಕ್ತದ ಕೊರತೆ ನೀಗಿಸಬಹುದು. ಪ್ರಮುಖವಾಗಿ ಪಾಸಿಟಿವ್ ರಕ್ತದ ಗುಂಪುಗಳ ಅಭಾವ ಉಂಟಾಗುತ್ತಿದೆ. ಇಂತಹ ರಕ್ತದ ಗುಂಪುಗಳುಳ್ಳವರು ರಕ್ತನಿಧಿ ಕೇಂದ್ರದಲ್ಲಿ ನೋಂದಣಿ ಮಾಡಿಸಿಕೊಂಡರೆ ಅವಶ್ಯವಿದ್ದಾಗ ರಕ್ತವನ್ನು ಪಡೆಯಲು ನೆರವಾಗುತ್ತದೆ' ಎಂದು ತಿಳಿಸಿದರು.
ಇನ್ನೋರ್ವ ಅತಿಥಿಗಳಾದ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾತೋಶ್ರೀ ತಾರಾ ದೇವಿ ರಾಂಪೂರೆ ಔಷದ ವಿಜ್ಞಾನ ಮಹಾವಿದ್ಯಾಲಯ ಪ್ರಾಧ್ಯಾಪಕರಾದ ಡಾ ನೀಲಕಂಠ ಪಾಟೀಲ್ ವಿಧ್ಯಾರ್ಥಿಗಳಿಗೆ ರಕ್ತದ ಗುಂಪುಗಳ ಬಗ್ಗೆ ಹಾಗೂ ರಕ್ತದಾನದಿಂದ ಆಗುವ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಎಸ್ ಎಸ್ ಗಲಗಲಿ, ಉಪ ಪ್ರಾಚಾರ್ಯ ಸಂಗಮೇಶ ನೀಲಾ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ರವೀಂದ್ರ ಕಾಗವಾಡ ಹಾಗೂ ಇನ್ನಿತರ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಹಾಜರಿದ್ದರು.