ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮ

ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮ

ಒಂದು ದಿನದ ರಾಷ್ಟ್ರೀಯ ವಿಚಾರ ಸಂಕೀರಣ

ದಿನಾಂಕ: 30.07.2024 ರಂದು ಬೆಳಿಗ್ಗೆ 10:00 ಗಂಟೆಗೆ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ, ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯ, ಕಲಬುರಗಿ ಹಾಗೂ ಡಾ. ಪಿ.ಎಸ್. ಶಂಕರ ಪ್ರತಿಷ್ಠಾನ, ಕಲಬುರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ಮಹಾವಿದ್ಯಾಲಯದ ಜೈವಿಕ ಹಾಗೂ ರಾಸಾಯನಿಕ ವಿಜ್ಞಾನ ವಿಭಾಗಳ ವತಿಯಿಂದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕೀರಣ ಕಾರ್ಯಕ್ರಮವನ್ನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಜರುಗಲಿದೆ. ಕಾರ್ಯಕ್ರಮವನ್ನು ಗುಲ್ಬರ್ಗಾ ವಿಶ್ವವಿದ್ಯಾಲಯ ಕಲಬುರ್ಗಿಯ ಉಪಕುಲಪತಿ ಪ್ರೊ ದಯಾನಂದ ಅಗಸರ ಉದ್ಘಾಟಿಸಲಿದ್ದಾರೆ.ಮುಖ್ಯ ವಕ್ತಾರರಾಗಿ ಪಿ ಎಸ್ ಶಂಕರ್ ಪ್ರತಿಷ್ಠಾನದ ರೂವಾರಿ ನಾಡೋಜ ಡಾ ಪಿ ಎಸ್ ಶಂಕರ್ ವಿಚಾರ ಸಂಕಿರಣದ ಮುಖ್ಯ ವಕ್ತಾರರಾಗಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಶಶೀಲ್ ಜಿ ನಮೋಶಿ ವಹಿಸಲಿದ್ದಾರೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಸಮೂಹ ಮಾಧ್ಯಮದ ಸಂಯೋಜಕರಾದ ಶ್ರೀ ಐ ಕೆ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ