ಶಿಗ್ಗಾಂವಿ ಉಪಚುನಾವಣೆ : ಮತ್ತೊಮ್ಮೆ ಯಾಸೀರ್ ಅಹ್ಮದ್ ಖಾನ್ ಪಠಾಣಗೆ ಕಾಂಗ್ರೆಸ್ ಟಿಕೆಟ್
ಶಿಗ್ಗಾಂವಿ ಉಪಚುನಾವಣೆ : ಮತ್ತೊಮ್ಮೆ ಯಾಸೀರ್ ಅಹ್ಮದ್ ಖಾನ್ ಪಠಾಣಗೆ ಕಾಂಗ್ರೆಸ್ ಟಿಕೆಟ್
ಬೆಂಗಳೂರು: ರಾಜ್ಯದ ಶಿಗ್ಗಾಂವಿ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆಗೆ ಅಳೆದು ತೂಗಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು, ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಆಯ್ಕೆ ಮಾಡಿದೆ.
ಈ ಮೊದಲು ಮೊದಲು ಬಸವರಾಜ ಬೊಮ್ಮಾಯಿ ಅವರ ಮಗ ಭರತ್ ಬೊಮ್ಮಾಯಿ ಅವರನ್ನು ಬಿಜೆಪಿ ಕಣಕ್ಕೆ ಇಳಿಸಿದೆ.
ಶಿಗ್ಗಾಂವಿ ಉಪ ಚುನಾವಣೆಗೆ ಕಾಂಗ್ರೆಸ್ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರನ್ನು ತನ್ನ ಅಭ್ಯರ್ಥಿಯಾಗಿ ಘೋಷಿಸಿದೆ.
ಕಳೆದ ಬಾರಿ ಬಸವರಾಜ್ ಬೊಮ್ಮಾಯಿ ಯವರು ಪಠಾಣ್ ಅವರ ವಿರುದ್ಧ 35 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು.
ಈ ಬಾರಿ ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್ ನೀಡಲಿದೆ ಎನ್ನುವ ಮಾತು ಕೇಳಿ ಬಂದಿತ್ತು. ಕಳೆದ ಬಾರಿಯಂತೆ ಈ ಸಲವೂ ಮತ್ತೆ ಯಾಸೀರ್ ಅವರಿಗೆ ಕಾಂಗ್ರೆಸ್ ಕೈ ಹಿಡಿದಿದೆ.
ಯಾಸೀರ್ ಅವರು ಈಗ ಎರಡನೇ ಬಾರಿ ಶಿಗ್ಗಾಂವಿ ಉಪಚುನಾವಣೆಯಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ಅವರ ತಾಯಿಯೂ ಸಹ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ಈ ಕ್ಷೇತ್ರವು ಮುಸ್ಲಿಮ ಬಾಹುಳ್ಯದಿಂದ ಕೂಡಿದ್ದು, 30%ಕ್ಕಿಂತ ಹೆಚ್ಚಿನ ಮತಗಳನ್ನು ಹೊಂದಿದೆ.
ಇದರ ಜೊತೆಗೆ ಕ್ಷೇತ್ರದಲ್ಲಿ ಬೊಮ್ಮಾಯಿ ವಿರುದ್ಧ ಅಸಮಾಧಾನ ಹೊಗೆಯಾಡುತ್ತಿದೆ.
ಈ ಎಲ್ಲ ಕಾರಣಗಳಿಂದ ಬೊಮ್ಮಾಯಿ ಗೆಲುವು ಸುಲಭದ ತುತ್ತಲ್ಲ ಎಂಬುದು ಮೆಲ್ನೋಟಕ್ಕೆ ಕಂಡು ಬರುತ್ತಿದೆ.
ಆದ್ದರಿಂದ ಇಲ್ಲಿ ಯಾಸಿನ್ ಅಹ್ಮದ್ ಖಾನ್ ಪಠಾಣ್ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್ ಮುಖಂಡರು ಭಾವಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಲಿಂಗಾಯತ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡಲು ಬಯಸಿದ್ದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹಮದ್ ಖಾನ್ ಅವರು ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಒತ್ತಡ ಹೇರಿದ್ದರು ಎಂದು ವರದಿಯಾಗಿತ್ತು. ಈ ಬಾರಿ ಶಿಗ್ಗಾಂವಿ ಯಾರಿಗೆ ಸಿಹಿ ನೀಡಲಿದೆ ಎಂಬುದು ಚರ್ಚಿತ ವಿಷಯವಾಗಿದೆ.