ಕಲಬುರಗಿಯ ಸರ್ವಾಂಗೀಣ ಅಭಿವೃದ್ಧಿ ನನ್ನ ಗುರಿ : ಪ್ರಿಯಾಂಕ್ ಖರ್ಗೆ
ಕಲಬುರಗಿಯ ಸರ್ವಾಂಗೀಣ ಅಭಿವೃದ್ಧಿ ನನ್ನ ಗುರಿ : ಪ್ರಿಯಾಂಕ್ ಖರ್ಗೆ
ಚಿತ್ತಾಪುರದ ಬಜಾಜ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಅದ್ದೂರಿ ಅಭಿನಂದನಾ ಸಮಾರಂಭದಲ್ಲಿ ಖುಷಿಯಿಂದ ಮಿಂದೆದ್ದ ಸಂಸದ ರಾಧಾಕೃಷ್ಣ
ಕಲಬುರಗಿ : ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಹಲವಾರು ಬಾರಿ ಜಿಲ್ಲೆಯ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿದ್ದೂ ಅದನ್ನು ಮುಂಬರುವ ದಿನಗಳಲ್ಲಿ ಪೂರ್ಣಗೊಳಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದು ವಾಗ್ದಾನ ಮಾಡಿದರು.
ಅನೇಕ ಜನಪರ ಕಾರ್ಯಕ್ರಮಗಳಿಗಾಗಿ ₹ 62 ಕೋಟಿ ವೆಚ್ಚದಲ್ಲಿ ಹಲವಾರು ಅಭಿವೃದ್ದಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈಗಾಗಲೇ ಸುಮಾರು 900 ಇಂಜಿನಿಯರಗಳನ್ನು ವಿವಿಧ ಇಲಾಖೆಯಲ್ಲಿ ಭರ್ತಿ ಮಾಡಲಾಗಿದ್ದು, ಇನ್ನೂಳಿದ ಇಲಾಖೆಗಳಲ್ಲಿ ಖಾಲಿ ಇರುವ ಎರಡು ಲಕ್ಷ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದರು.
ಮುಂಬರುವ ಒಂದು ವರ್ಷದಲ್ಲಿ ಚಿತ್ತಾಪುರ ಮತಕ್ಷೇತ್ರದ ಅಭಿವೃದ್ದಿಯ ಸಮಗ್ರ ಚಿತ್ರಣವನ್ನೇ ಬದಲಿಸಲಿದ್ದೇನೆ ಎಂದರು.
ಕಲ್ಯಾಣ ಪಥ ಯೋಜನೆಯಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ರಸ್ತೆಗಳ ಅಭಿವೃದ್ದಿಗೆ ₹1,000 ಕೋಟಿ ಮೀಸಲಿಡಲಾಗಿದೆ. ಕೋಲ್ಡ್ ಸ್ಡೋರೇಜ್ ಹಾಗೂ ಸಾಮೂಹಿಕ ಶೌಚಾಲಯ ನಿರ್ಮಾಣ ನನ್ನ ಮುಂದಿನ ಗುರಿಯಾಗಿದೆ ಎಂದರು ನುಡಿದರು.
ಇತ್ತೀಚಿಗೆ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ₹ 7,000 ಕೋಟಿ ಹಾಗೂ ಚಿತ್ತಾಪುರ ಮತಕ್ಷೇತ್ರವೊಂದಕ್ಕೆ ₹ 300 ಕೋಟಿ ಯೋಜನೆಗಳಿಗೆ ಅನುಮೋದನೆ ದೊರಕಿದೆ. ಜಿಲ್ಲೆಯ ಮೂವತ್ತು ಗ್ರಾಮಗಳ ಅಭಿವೃದ್ದಿಯ ನೀಲ ನಕ್ಷೆ ಸಿದ್ಧಪಡಿಸಲಾಗಿದೆ.
ಇದು ಕೇವಲ ಗ್ರಾಮೀಣ ಪ್ರದೇಶ ಮಾತ್ರವಲ್ಲ, ವಾಡಿಯ ಸಮಗ್ರ ಅಭಿವೃದ್ದಿಯ ನೀಲನಕ್ಷೆಯೂ ಸಿದ್ಧವಾಗಿದೆ ಎಂದು ಹೇಳಿದ್ದಾರೆ. ಒಟ್ಟಾರೆ ಇದಕ್ಕೆ ₹25 ಕೋಟಿ ತೆಗೆದಿರಿಸಲಾಗಿದೆ. ಚಿತ್ತಾಪುರ ಪಟ್ಟಣದಲ್ಲಿ ಮೃಗಾಲಯ, ವಿಜ್ಞಾನ ಕೇಂದ್ರಗಳ ಸ್ಥಾಪನೆಯ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.
ಚಿತ್ತಾಪುರ ತಾಲೂಕಿನಲ್ಲಿ "ಕಾಯಕ ಗ್ರಾಮ" ಯೋಜನೆ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ಇದರಲ್ಲಿ ಸಂಸದರ ಅನುದಾನ ಕೂಡಾ ಬಳಕೆಯಾಗಲಿದೆ.
ಇದರ ಹಿಂದೆ ಸಂಸದ ರಾಧಾಕೃಷ್ಣ ದೊಡ್ಡಮನಿ ಯವರ ಕನಸಿದೆ. ಈ ಯೋಜನೆಯಡಿಯಲ್ಲಿ ಕನಿಷ್ಠ ₹ 2 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು.
ಚಿತ್ತಾಪುರವನ್ನು ಸಮಗ್ರವಾಗಿ ಅಭಿವೃದ್ಧಿ ಮಾಡುವುದಕ್ಕೆ ಕಂಕಣ ಬದ್ಧನಾಗಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪುನರುಚ್ಚರಿಸಿದ್ದಾರೆ.
ಸಚಿವ ಡಾ ಶರಣಪ್ರಕಾಶ್ ಪಾಟೀಲ್ ಮಾತನಾಡಿ, ಕಳೆದ ವಿಧಾನ ಸಭೆ ಚುನಾವಣೆ ಪೂರ್ವದಲ್ಲಿ ಕೊಟ್ಟ ಮಾತಿನಂತೆ ₹ 52,000 ಕೋಟಿ ಖರ್ಚು ಮಾಡಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದೂ, ಸಿಎಂ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರದ ಸಾಧನೆ ಎಂದು ಡಾ ಶರಣಪ್ರಕಾಶ್ ಪಾಟೀಲ್ ಬಣ್ಣಿಸಿದ್ದಾರೆ.
ಈ ವೇಳೆ ನೂತನ ಕಲಬುರಗಿ ಲೋಕಸಭಾ ಸದಸ್ಯರಾದ ರಾಧಾಕೃಷ್ಣ ದೊಡ್ಡಮನಿ ಯವರನ್ನು ಅದ್ದೂರಿ ಸಮಾರಂಭದಲ್ಲಿ ಸಮಸ್ತ ಚಿತ್ತಾಪುರ ಮತಕ್ಷೇತ್ರದ ಜನರು ಅಭಿನಂದನೆ ಸಲ್ಲಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಸಂಸದ ರಾಧಾಕೃಷ್ಣ ದೊಡ್ಡಮನಿ, ಕಲಬುರಗಿ ಜನತೆಯ ಅಭಿಲಾಷೆಯಂತೆ ಕಾರ್ಯನಿರ್ವಹಿಸುವುದಾಗಿ ಹೇಳಿದರು.
ಈ ಎಲ್ಲ ಕಾರ್ಯಗಳಿಗೆ ಸರ್ವ ಜನಾಂಗದ ಸಹಕಾರ ಬಯಸುವುದಾಗಿ ನುಡಿದರು.
ಈ ಸಂದರ್ಭದಲ್ಲಿ ಸಚಿವ ಡಾ ಶರಣಪ್ರಕಾಶ್ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್ , ಶಾಸಕ ವಿಶ್ವನಾಥ್ ಎಂ ವೈ ಪಾಟೀಲ್, ಭೀಮಣ್ಣ ಸಾಲಿ, ನಾಗರೆಡ್ಡಿ ಪಾಟೀಲ್ ಕರದಾಳ, ರಮೇಶ್ ಮರಗೋಳ, ಶಿವರುದ್ರ ಭೀಣಿ, ಶಿವಾನಂದ ಪಾಟೀಲ ಮರತೂರ, ಬಸವರಾಜ ಪಾಟೀಲ ಹೇರೂರ, ಶಂಭುಲಿಂಗ ಗುಂಡಗೂರ್ತಿ, ಶ್ರೀನಿವಾಸ ಸಗರ, ಟೋಪಣ್ಣ ಕೊಮಟೆ, ಶಿವಾನಂದ ಹೊನಗುಂಟಿ, ಪ್ರಕಾಶ್ ಜೈನ, ಶೀಲಾ ಕಾಶಿ, ಮಲ್ಲಿಕಾರ್ಜುನ ಬೆಣ್ಣೂರಕರ್ ಉದಯಕುಮಾರ್ ಸಾಗರ, ಸುನೀಲ್ ದೊಡ್ಡಮನಿ, ಶಿವರಾಜ ಪಾಟೀಲ ಕಲಗುರ್ತಿ, ಮಾಣಿಕ್ ಸಂಗನ್, ಮಲ್ಲಪ್ಪ ಹೊಸಮನಿ, ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರನ್ನು ಅದ್ದೂರಿ ಮೆರವಣಿಗೆ ಮೂಲಕ ಸಮಾರಂಭದ ವೇದಿಕೆಗೆ ಕರೆ ತರಲಾಯಿತು.
ನಾಗರೆಡ್ಡಿ ಪಾಟೀಲ್ ಕರದಾಳ ಪ್ರಾಸ್ತಾವಿಕವಾಗಿ ಮಾತನಾಡಿದರು, ಭೀಮಣ್ಣ ಸಾಲಿ ಸ್ವಾಗತಿಸಿದರು, ಬಸವರಾಜ ಚಿನಮಳ್ಳಿ ಹಾಗೂ ಶಾಂತಣ್ಣ ಚಾಳಿಕರ ನಿರೂಪಿಸಿದರು.