ಮಾದಪ್ಪಾ ಮಡಿವಾಳ ಜಿಲ್ಲಾ ಮಟ್ಟಕ್ಕೆ ಆಯ್ಕೆ:- ಹರ್ಷ
ಮಾದಪ್ಪಾ ಮಡಿವಾಳ ಜಿಲ್ಲಾ ಮಟ್ಟಕ್ಕೆ ಆಯ್ಕೆ:- ಹರ್ಷ
ಕಮಲನಗರ : ತಾಲೂಕು ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಯಲ್ಲಿ ,(pink and speech) ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ವತಿಯಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರಿಗಾಗಿ ಪ್ರತಿವರ್ಷದಂತೆ ಈ ವರ್ಷವೂ ನಡೆಸಿರು ಸಹ ಪಠ್ಯ ಚಟುವಟಿಕೆಗಳ ಆಶುಭಾಷಣ (ಪ್ರಾಥಮಿಕ ವಿಭಾಗದಲ್ಲಿ) ಸ್ಪರ್ಧೆಯಲ್ಲಿ ತಾಲೂಕಿನ ಹೊಳಸಮುದ್ರ ವಲಯದ ಸಂಪನ್ಮೂಲ ವ್ಯಕ್ತಿಯಾಗಿರುವ ಮಾದಪ್ಪಾ.ಎಸ್.ಮಡಿವಾಳ ಅವರು ಸರಕಾರಿ ಪ್ರೌಢ ಶಾಲೆ ಸಂತಪೂರನಲ್ಲಿ ನಡೆದ ಔರಾದ ತಾಲೂಕು ಘಟಕದ ಶಿಕ್ಷಕರ ಸಹ ಪಠ್ಯ ಚಟುವಟಿಕೆಗಳ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಪ್ರಯುಕ್ತ ಕಾರ್ಯಕ್ರಮದ ನೋಡಲ್ ಅಧಿಕಾರಿಗಳಾದ ಶ್ರೀ ಬಲಭೀಮ್ ಕುಲಕರ್ಣಿ ಅವರಿಂದ ಪ್ರಶಸ್ತಿ ಪತ್ರ ಮತ್ತು ನಗದು ಬಹುಮಾನವನ್ನು ನೀಡಲಾಯಿತು.
ಕಮಲನಗರ ತಾಲೂಕಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಲಿಂಗಾನಂದ ಮಹಾಜನ, ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ ಮತ್ತು ಕನ್ನಡ ಸಾಹಿತ್ಯ ಪರಿಷತನ ಅಧ್ಯಕ್ಷರಾದ ಪ್ರಶಾಂತ ಮಠಪತಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸಿ ಎಂ ಗಳಿಗೆ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕಮಲನಗರ ತಾಲೂಕಿನ ಅಧ್ಯಕ್ಷರಾದ ಸಂಗಮೇಶ್ವರ ಎಸ್ ಮುರ್ಕೆರವರು ಹರ್ಷ ವ್ಯಕ್ತಪಡಿಸಿ, ಅಭಿನಂದನೆಗಳು ತಿಳಿಸಿದಾರೆ.