ಚಿತ್ತಾಪುರ ಮತಕ್ಷೇತ್ರದಲ್ಲಿ ಬಿಜೆಪಿ ಸದಸ್ಯತಾ ಅಭಿಯಾನ : ಡಾ ಅಬಾರಾಯ ಅಷ್ಠಗಿ ಚಾಲನೆ
ಚಿತ್ತಾಪುರ ಮತಕ್ಷೇತ್ರದಲ್ಲಿ ಬಿಜೆಪಿ ಸದಸ್ಯತಾ ಅಭಿಯಾನ : ಡಾ ಅಬಾರಾಯ ಅಷ್ಠಗಿ ಚಾಲನೆ
ಭಾರತೀಯ ಜನತಾ ಪಕ್ಷವು ರಾಷ್ಟ್ರದಾದ್ಯಂತ ಹಮ್ಮಿಕೊಂಡಿರುವ ಸದಸ್ಯತಾ ಅಭಿಯಾನವು ಪಕ್ಷದ ತಳಹದಿಯನ್ನು ಹೆಚ್ಚಿಸುವುದು ಮತ್ತು ಅದರ ಸಿದ್ಧಾಂತವನ್ನು ಹರಡುವುದು ಈ ಅಭಿಯಾನದ ಹಿಂದಿನ ಉದ್ದೇಶವಾಗಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹಾಗೂ ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಡಾ ಅಂಬಾರಾಯ ಅಷ್ಠಗಿ ಹೇಳಿದ್ದಾರೆ.
ಪಟ್ಟಣದ ನಾಗಾವಿ ವೃತ್ತದಲ್ಲಿ ಬಿಜೆಪಿ ಚಿತ್ತಾಪುರ ಮಂಡಲ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತಾ ಅಭಿಯಾನಕ್ಕೆ ಚಾಲನೆ ನೀಡಿ ಅವರು,
ಹಿಂದೆ ಸದಸ್ಯತ್ವ ಮಾಡಿದಾಗ ಕೇವಲ ಮಿಸ್ಡ್ ಕಾಲ್ ಕೊಡುವ ಪದ್ಧತಿ ಇತ್ತು. ಈ ಬಾರಿ ಮಿಸ್ಡ್ ಕಾಲ್ ಬಳಿಕ ಲಭಿಸುವ ಲಿಂಕ್ ಮೂಲಕ ಪೂರ್ಣ ಮಾಹಿತಿ ಪಡೆಯಲಾಗುತ್ತಿದೆ. ವಿಳಾಸ, ಕುಟುಂಬದ ಮಾಹಿತಿ, ವಿಧಾನಸಭಾ ಕ್ಷೇತ್ರ, ಬೂತ್ ವಿವರ, ಇಮೇಲ್ ಐಡಿಯನ್ನೂ ಪಡೆಯಲಾಗುತ್ತಿದೆ. ಪ್ರಧಾನಿಯವರ ವಿಕಸಿತ ಭಾರತದ ಕಲ್ಪನೆಯಂತೆ ಆ ಗುರಿಯತ್ತ ಹೆಜ್ಜೆ ಇಡಲು ಈ ಅಭಿಯಾನ ನಡೆಯುತ್ತಿದೆ ಎಂದು ಡಾ ಅಂಬಾರಾಯ ಅಷ್ಠಗಿ ನುಡಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಸವರಾಜ ಬೆಣ್ಣೂರಕರ್ ಮಾತನಾಡಿ, ಬಿಜೆಪಿ ಹೈಕಮಾಂಡ್ ಚಿತ್ತಾಪುರ ಕ್ಷೇತ್ರದಲ್ಲಿ 60 ಸಾವಿರ ಬಿಜೆಪಿ ಸದಸ್ಯತ್ವ ಮಾಡುವ ಗುರಿ ನೀಡಿದ್ದಾರೆ ,ಈಗಾಗಲೇ 15 ಸಾವಿರ ಸದಸ್ಯತ್ವದ ಗುರಿ ತಲುಪಲಾಗಿದೆ. ಮುಂಬರುವ ದಿನಗಳಲ್ಲಿ ಕಾರ್ಯಕರ್ತರ ಹಾಗೂ ಮುಖಂಡರ ಸಹಕಾರದೊಂದಿಗೆ 60 ಸಾವಿರ ಸದಸ್ಯತ್ವದ ಗುರಿ ತಲುಪಲಾಗುವುದು ಎಂದು ಹೇಳಿದರು.
ಚಿತ್ತಾಪುರ ಮತಕ್ಷೇತ್ರದಲ್ಲಿ ಸದಸ್ಯತಾ ಅಭಿಯಾನವು ಭರದಿಂದ ಸಾಗುತ್ತಿದೆ ಎಂದು ಮಂಡಲ ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಮಾಹಿತಿ ನೀಡಿದರು. ಈಗಾಗಲೇ ಕಾರ್ಯಕರ್ತರು ಬಹಳ ಉತ್ಸಾಹದಿಂದ ಸದಸ್ಯತ್ವ ಅಭಿಯಾನದಲ್ಲಿ ತೋಡಗಿದ್ದಾರೆ ಎಂದರು.
ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಅಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ್, ನಗರಾಧ್ಯಕ್ಷ ಆನಂದ ಪಾಟೀಲ ನರಿಬೋಳ, ಕಾರ್ಯದರ್ಶಿ ನಾಗರಾಜ್ ಹೂಗಾರ, ಗೋಪಾಲ್ ರಾಠೋಡ, ಬಸವರಾಜ ಸಂಕನೂರ, ಪುರಸಭೆ ಸದಸ್ಯ ಶ್ಯಾಮ್ ಮೇಧಾ, ಶಿವರಾಮ್ ಚವ್ಹಾಣ, ಮಲ್ಲು ಇಂದೂರ, ಅಂಬರೀಷ್ ರಂಗನೂರ್ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.