ಹೈನು ವಿಜ್ಞಾನ ಮಹಾವಿದ್ಯಾಲಯದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಆಚರಣೆ

ಹೈನು ವಿಜ್ಞಾನ ಮಹಾವಿದ್ಯಾಲಯದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಆಚರಣೆ
ಕಮಲಾಪೂರ: ತಾಲೂಕಿನ ಮಹಾಗಾಂವ ಕ್ರಾಸ್ ನ ಹೈನು ವಿಜ್ಞಾನ ಮಹಾವಿದ್ಯಾಲಯದಲ್ಲಿ 69ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ಡೀನರಾದ ಡಾ.ಮಂಜುನಾಥ ಎಚ್,ಸಹಾಯಕ ಪ್ರಾಧ್ಯಪಕರಾದ ಡಾ.ದೇವರಾಜು ಆರ್,ಡಾ.ಅಕ್ಷಯಕುಮಾರ,ಡಾ.ಆದರ್ಶ ಎಮ್.ಕಲ್ಲಾ, ಡಾ.ಆನಂದ ಗುತ್ತೇದಾರ ಸೇರಿದಂತೆ ಇತರರು ಇದ್ದರು.ನಂತರ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಮತ್ತು ಮಹಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ 18ನೇಯ ಅಂತರ್ ಕಾಲೇಜಿನ ಕ್ರೀಡಾಕೂಟ 2024-25ರ ಅಂಗವಾಗಿ ಉಡುಪುಗಳನ್ನು ವಿತರಿಸಲಾಯಿತು.