ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ : ಬೆಚ್ಚಿ ಬಿದ್ದ ಜನತೆ
ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ : ಬೆಚ್ಚಿ ಬಿದ್ದ ಜನತೆ
ಯಾದಗಿರಿ : ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಅಮಾನುಷವಾಗಿ ಕೊಲೆ ಮಾಡಲಾಗಿದೆ.
ಎಎಂಡಿ ಕ್ಯಾಂಪಿನ ಬಳಿ ಶನಿವಾರ ಸಂಜೆ ನಡೆದಿದ್ದ ದುರ್ಘಟನೆಯಲ್ಲಿ
ಜಾಪಾನಾಯಕ ತಾಂಡಾದ ತಿಪ್ಪಣ್ಣ (35) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಶಹಾಪುರದಿಂದ ಯಾದಗಿರಿಗೆ ಬೈಕ್ ಮೇಲೆ ತಿಪ್ಪಣ್ಣ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಅವನನ್ನು ನಿಲ್ಲಿಸಿ, ಮುಖ ಹಾಗೂ ಕುತ್ತಿಗೆ
ಭಾಗ ಸೇರಿದಂತೆ ಎಲ್ಲೆಂದರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದು ಮೂಲಗಳು ತಿಳಿಸಿವೆ.
ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಡಿವೈಎಸ್ಪಿ ಸೇರಿದಂತೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.