ರಾಜ್ಯದ 74 ಆದರ್ಶ ವಿದ್ಯಾಲಯಗಳಲ್ಲಿ ವಸತಿ ಸೌಲಭ್ಯ ಒದಗಿಸುವಂತೆ ಪ್ರಾಥಮಿಕ , ಪ್ರೌಢ ಶಿಕ್ಷಣ ಇಲಾಖೆಯ ಸಚಿವರಿಗೆ , ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಪ್ರಮೋದ್ ಎಂ ದೊರೆ
ರಾಜ್ಯದ 74 ಆದರ್ಶ ವಿದ್ಯಾಲಯಗಳಲ್ಲಿ ವಸತಿ ಸೌಲಭ್ಯ ಒದಗಿಸುವಂತೆ ಪ್ರಾಥಮಿಕ , ಪ್ರೌಢ ಶಿಕ್ಷಣ ಇಲಾಖೆಯ ಸಚಿವರಿಗೆ , ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಪ್ರಮೋದ್ ಎಂ ದೊರೆ
ಯಡ್ರಾಮಿ: ಕರ್ನಾಟಕ ರಾಜ್ಯದ 74 ಆದರ್ಶ ವಿದ್ಯಾಲಯ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಒದಗಿಸುವಂತೆ ಪ್ರಮೋದ್ ಎಂ ದೊರೆ ಯಡ್ರಾಮಿ ಅವರು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಸಚಿವರಿಗೆ ಮನವಿ ಪತ್ರದ ಮೂಲಕ ಅಗ್ರಹಿಸಿದ್ದಾರೆ. ಸುಮಾರು ವರ್ಷಗಳಿಂದ ಕರ್ನಾಟಕ ರಾಜ್ಯದಲ್ಲಿ 74 ಆದರ್ಶ ವಿದ್ಯಾಲಯಗಳಿದ್ದು ಈ ವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ವಸತಿ ಸೌಕರ್ಯವಿರುವುದಿಲ್ಲ ಇದರಿಂದ ಅಂದರೆ ಸುಮಾರು 60 ರಿಂದ 70 ಕಿಲೋ ಮೀಟರ್ ದೂರದ ಊರಿಂದ ಬರುವಂತಹ ವ್ಯಾಸಂಗ ಮಾಡಲು ಬರುವಂತಹ ವಿದ್ಯಾರ್ಥಿಗಳಿಗೆ ಅನಾನುಕೂಲ ಉಂಟಾಗುತ್ತಿದ್ದು ಇದರಿಂದ ವಿದ್ಯಾರ್ಥಿಗಳ ಅಭ್ಯಾಸದ ಮೆಲೆ ಕೆಟ್ಟ ಪರಿಣಾಮ ಬೀರುತ್ತಿದೆ ಇದರಿಂದ ವಿದ್ಯಾರ್ಥಿಗಳ ವ್ಯಾಸಂಗದಲ್ಲಿ ಹಿನ್ನಡೆಯಾಗಿ ಫಲಿತಾಂಶದ ಮೇಲೆ ದೊಡ್ಡ ಮಟ್ಟದ ಹೊಡೆತ ಬೀಳುತ್ತಿದೆ . ಈ ವಿಷಯದ ಕುರಿತು ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಸಚಿವರು ಹಾಗೂ ರಾಜ್ಯದ ಮುಖ್ಯಮಂತ್ರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಯಾಕೆಂದರೆ ನಮ್ಮ ಕರ್ನಾಟಕ ರಾಜ್ಯದಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಹಾಗೂ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಿಗೆ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ ಎಲ್ಲ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯವಿದೆ !ಆದರೆ. ನಮ್ಮ ರಾಜ್ಯದ 74 ಆದರ್ಶ ವಿದ್ಯಾಲಯ ಶಾಲೆಗಳಲ್ಲಿ ವಸತಿ ಸೌಲಭ್ಯ ಇಲ್ಲದಿರುವುದು ನಾಚಿಕೆಗೇಡಿತನದ ಸಂಗತಿಯಾಗಿದೆ . ಸರಕಾರ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಆದರ್ಶ ವಿದ್ಯಾಲಯ ಶಾಲೆಗಳನ್ನು ಸ್ಥಾಪನೆ ಮಾಡಲಾಗಿದೆ ನಮ್ಮ
ರಾಜ್ಯದಲ್ಲಿ 74 ನಾಲ್ಕು ಆರ್ದಶ ವಿದ್ಯಾಲಯ ಶಾಲೆಗಳು ಇರುತ್ತದೆ ಆದರೆ ಯಾವುದೇ ಆದರ್ಶ ವಿದ್ಯಾಲಯ ಶಾಲೆಗೆ ವಸತಿ ಸೌಲಭ್ಯ ಇರುವುದಿಲ್ಲ ಹಾಗೂ ಅದೇ ರೀತಿಯಾಗಿ ಜೇವರ್ಗಿ ತಾಲೂಕಿನಲ್ಲಿಯು ಒಂದು ಆದರ್ಶ ವಿದ್ಯಾಲಯವಿರುತ್ತದೆ ಇಲ್ಲಿಯೂ ಸಹಿತ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯವಿರುವುದಿಲ್ಲ ಆದಾ ಕಾರಣ ಸರ್ಕಾರವು ವಿದ್ಯಾರ್ಥಿಗಳಿಗೆ ವ್ಯಾಸಂಗದ ಹಿತದೃಷ್ಟಿಯಿಂದ ವಸತಿ ಸೌಲಭ್ಯವನ್ನು ಅತಿ ಶೀಘ್ರದಲ್ಲಿ ಒದಗಿಸಿ ಕೊಡಬೇಕು ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕರ್ನಾಟಕ ರಾಜ್ಯದ ಆದರ್ಶ ವಿದ್ಯಾಲಯ ಶಾಲೆಗಳಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರ ವ್ಯಾಸಂಗದ ಹಿತದೃಷ್ಟಿಯಿಂದ ವಸತಿ ಸೌಲಭ್ಯ ಕಲ್ಪಿಸಿ ಕೊಡಬೇಕೆಂದು ಪ್ರಮೋದ್ ಎಂ ದೊರೆ ಯಡ್ರಾಮಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ವರದಿ ಜೆಟ್ಟೆಪ್ಪ ಎಸ್ ಪೂಜಾರಿ