ಡಾ.ಪ್ರವೀಣ ಬೀರಾದಾರ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ : ಸಿರಗಾಪೂರ ಹರ್ಷ

ಡಾ.ಪ್ರವೀಣ ಬೀರಾದಾರ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ : ಸಿರಗಾಪೂರ ಹರ್ಷ

 ಡಾ.ಪ್ರವೀಣ ಬೀರಾದಾರ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ : ಸಿರಗಾಪೂರ ಹರ್ಷ

ಕಲಬುರಗಿ: ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆ ವತಿಯಿಂದ ನ‌.17 ರಂದು ಬೆಳಗಾವಿಯಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯೋತ್ಸವ ಮತ್ತು ಸುವರ್ಣ ಮಹೋತ್ಸವ ಪುರಸ್ಕಾರ ಪ್ರದಾನ ಕಾರ್ಯಕ್ರಮ ಸಮಾರಂಭದಲ್ಲಿ ಕಲಬುರಗಿಯ ಶಿಕ್ಷಣ ಪ್ರೇಮಿ,ಜ್ಞಾನಶಾರದಾ ಅಕಾಡೇಮಿ ಅಧ್ಯಕ್ಷರಾದ ಡಾ.ಪ್ರವೀಣ ಬೀರಾದಾರ ಅವರನ್ನು ಕರ್ನಾಟಕ ರಾಜ್ಯೋತ್ಸವ ಪುರಸ್ಕಾರಕ್ಕೆ ಆಯ್ಕೆ ಮಾಡಿರುವುದಕ್ಕೆ ಕನ್ನಡ ಭೂಮಿ ಜಾಗೃತಿ ಸಮಿತಿ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಹರ್ಷ ವ್ಯಕ್ತಪಡಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಡಾ.ಪ್ರವೀಣ ಬೀರಾದಾರ ಅವರು ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ.ಅಲ್ಲದೆ ಸಾಮಾಜಿಕ ಕಳಕಳಿ ಹೊಂದಿರುವ ಅವರು ಕನ್ನಡ,ನೆಲ,ಜಲ ರಕ್ಷಣೆಗೆ ಕೈಜೋಡಿಸಿದ್ದಾರೆ.ಅವರ ಈ ಸಾಧನೆ ಗಮನಿಸಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ ಎಂದು ಅವರು ತಿಳಿಸಿದ್ದಾರೆ.