ಚಿಂಚೋಳಿ | ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.
ಚಿಂಚೋಳಿ | ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.
ಚಿಂಚೋಳಿ : ಮಕ್ಕಳು ಶಿಸ್ತು, ಸಮಯಪಾಲನೆ, ಚಾರಿತ್ರ್ಯ ವನ್ನು ಅಳವಡಿಸಿಕೊಳ್ಳಬೇಕು. ಮಕ್ಕಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪುಸ್ತಕ ಓದುವುದರಿಂದ ಜ್ಞಾನ ಬರುವುದರ ಜೊತೆಗೆ ವ್ಯಕ್ತಿತ್ವದ ವಿಕಾಸವಾಗುತ್ತದೆ ಎಂದು ಪ್ರಾಚಾರ್ಯ ಮಲ್ಲಿಕಾರ್ಜುನ ಪಾಲಾಮೂರ್ ಹೇಳಿದರು.
ಚಿಂಚೋಳಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು. ಮಕ್ಕಳ ದಿನಾಚರಣೆ ನಿಮಿತ್ತ ವಿವಿಧ ಸ್ಪರ್ಧೆ ಮತ್ತು ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು ಎಂದು ತಿಳಿಸಿದರು
ಮುಖ್ಯ ಅತಿಥಿಗಳಾಗಿ ಭಾರತ ಜ್ಞಾನ ವಿಜ್ಞಾನ ಸಮಿತಿ ಅಧ್ಯಕ್ಷ ಬಸಯ್ಯಾ ಗುತ್ತೇದಾರ, ಪ್ರಭು ಜಾಣ ಆಗಮಿಸಿದ್ದರು. ಉಪನ್ಯಾಸಕರಾದ ಹಣಮಂತ ಕೋರೆ, ಶಿವಕುಮಾರ ಪಾಟೀಲ ಮಾತನಾಡಿದರು. ವಿಶೇಷವಾಗಿ ವಾಲಿಬಾಲ್ ಆಟದಲ್ಲಿ ಜಿಲ್ಲೆಗೆ ಪ್ರಥಮ, ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಿರುಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಹಾಗೂ ನಿರಂತರ ಹಾಜರಾತಿ ಇರುವ ವಿದ್ಯಾರ್ಥಿಗಳಿಗೆ ಬಹುಮಾನ ಕೊಟ್ಟು ಪ್ರೋತ್ಸಾಹಿಸಲಾಯಿತು. ಉಪನ್ಯಾಸಕಿ ವಿಜಯಲಕ್ಷ್ಮಿ ಹಂಚನಾಳ ಸ್ವಾಗತಿಸಿದರು. ಡಾ.ಶಮಸೋದ್ದಿನ್ ವಂದಿಸಿದರು. ಚಕ್ರವರ್ತಿ ನಿರೂಪಿಸಿದರು.