ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು : ಸಾರ್ವಜನಿಕರಲ್ಲಿ ಭುಗಿಲೆದ್ದ ಆಕ್ರೋಶ

ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು  : ಸಾರ್ವಜನಿಕರಲ್ಲಿ ಭುಗಿಲೆದ್ದ ಆಕ್ರೋಶ

ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು : ಸಾರ್ವಜನಿಕರಲ್ಲಿ ಭುಗಿಲೆದ್ದ ಆಕ್ರೋಶ 

ಬಳ್ಳಾರಿ: ಇದೆ ತಿಂಗಳ 11ನೇ ತಾರೀಖಿನಂದು ಬಳ್ಳಾರಿ ತಾಲೂಕಿನ ಮೋಕಾ ಗ್ರಾಮದ ನಂದಿನಿ, ನ.12ರಂದು ಬಸರಕೋಡ್ ಗ್ರಾಮದ ಲಲಿತಮ್ಮ ಸಾವನ್ನಪ್ಪಿದ್ದರು. ಇದೀಗ ರೋಜಾ ಎನ್ನುವವರು ಗುರುವಾರ ಸಾವಿಗೀಡಾಗಿದ್ದು, ಮತ್ತೋರ್ವ ಬಾಣಂತಿಯ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗುತ್ತಿದೆ.

ನವೆಂಬರ್ 16 ರಂದು ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೆ ಒಳಗಾದ ಬಾಣಂತಿಯರು ಸಾಲುಸಾಲಾಗಿ ಸಾವಿಗೀಡಾಗುತ್ತಿದ್ದು, ಗುರುವಾರ ಮೃತರ ಸಂಖ್ಯೆ 3ಕ್ಕೆ ಏರಿಕೆಯಾಗಿದ್ದು, ಸಾರ್ವಜನಿಕರಲ್ಲಿ ಆಕ್ರೋಶ ಭುಗಿಲೆದ್ದಿದೆ. ಮೃತರ ಸಂಬಂಧಿಕರ ಮತ್ತು ಮಕ್ಕಳ ಆಕ್ರಂದನ ಮುಗಿಲು ಮುಟ್ಟುವಂತಿದೆ.

ನ.9 ರಂದು ಜಿಲ್ಲಾಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿ ಶಸ್ತ್ರಚಿಕಿತ್ಸೆಗೆ ಒಳಗಾದ ಗರ್ಭಿಣಿಯರ ಪೈಕಿ ಐವರು ಬಾಣಂತಿಯರ ಆರೋಗ್ಯದಲ್ಲಿ ಏರುಪೇರಾಗಿರುವುದು ಇಲ್ಲಿ ಸ್ಮರಿಸಬಹುದಾಗಿದೆ .ಆನಂತರ ಇವರನ್ನು ಬಿಮ್ಸ್‌ಗೆ ದಾಖಲಿಸಲಾಗಿತ್ತು.

ಈ ಸರಣಿ ಸಾವುಗಳ ತನಿಖೆಗೆ ವಿಶೇಷ ತನಿಖಾ ತಂಡ ರಚನೆ 

 ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಸಿದಂತೆ ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಸೂಚನೆ ಮೇರೆಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಡಾ। ಸಿ.ಸವಿತಾ, ಡಾ। ಬಿ.ಭಾಸ್ಕರ್, ಡಾ। ಟಿ. ಆ‌ರ್.ಹರ್ಷ ಅವರನ್ನೊಳಗೊಂಡ ತನಿಖಾ ತಂಡ ರಚಿಸಲಾಗಿದೆ. 

ಈ ತನಿಖಾ ತಂಡ ಆಸ್ಪತ್ರೆಗೆ ಭೇಟಿ ನೀಡಿದ್ದು, ತನಿಖೆ ಮುಂದುವರಿದಿದೆ.

ಇಂತಹ ಪ್ರಮಾದಗಳಿಗೆ ತನಿಖೆ ಮಾಡಿ ವರದಿ ನೀಡುವ ಮುನ್ನ ಈ ಘಟನೆಗಳು ನಡೆಯದಂತೆ ವೈದ್ಯರು ಮತ್ತು ಸಂಬಂಧಪಟ್ಟವರು ಜಾಗೃತಿ ವಹಿಸಬೇಕು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.