ರಾಷ್ಟ್ರದ ಅಭಿವೃದ್ಧಿಗೆ ಸಹಕಾರಿ ಸಂಸ್ಥೆಗಳ ಕೊಡುಗೆ ಅನನ್ಯ: ಕೆ.ಚೋರಗಸ್ತಿ

ರಾಷ್ಟ್ರದ ಅಭಿವೃದ್ಧಿಗೆ ಸಹಕಾರಿ ಸಂಸ್ಥೆಗಳ ಕೊಡುಗೆ ಅನನ್ಯ: ಕೆ.ಚೋರಗಸ್ತಿ

ಸಹಕಾರಿ ಧುರೀಣ ಸಂಗಮೇಶ್ವರ ಕೆ.ಚೋರಗಸ್ತಿ ಅಭಿಮತ | ಭೀಮಳ್ಳಿಯಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ

ರಾಷ್ಟ್ರದ ಅಭಿವೃದ್ಧಿಗೆ ಸಹಕಾರಿ ಸಂಸ್ಥೆಗಳ ಕೊಡುಗೆ ಅನನ್ಯ: ಕೆ.ಚೋರಗಸ್ತಿ

ಕಲಬುರಗಿ: ರಾಷ್ಟ್ರದ ಅನೇಕ ಜನಸಾಮಾನ್ಯರ ಆರ್ಥಿಕ ಜೀವನದ ಸುಗಮ ನಿರ್ವಹಣೆಗೆ ಸಾಕಷ್ಟು ಸಹಾಯಕರವಾಗಿ ಸಹಕಾರಿ ಸಂಸ್ಥೆಗಳು ಸೇವೆ ಸಲ್ಲಿಸುತ್ತಿವೆ. ಸಾಲಗಾರರು ಸೂಕ್ತ ಸಮಯಕ್ಕೆ ಸಾಲ ಮರುಪಾವತಿ ಮಾಡುವ ಮೂಲಕ ತಾವು ಜೊತೆಗೆ ಸಂಸ್ಥೆಯ ಬೆಳವಣಿಗೆ ಸಾಧ್ಯವಾಗುತ್ತದೆ. ರಾಷ್ಟ್ರದ ಅಭಿವೃದ್ಧಿಗೆ ಸಹಕಾರಿ ಸಂಸ್ಥೆಗಳ ಕೊಡುಗೆ ಅನನ್ಯವಾಗಿದೆ ಎಂದು ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಉಪಾಧ್ಯಕ್ಷ ಸಂಗಮೇಶ್ವರ ಕೆ.ಚೋರಗಸ್ತಿ ಅಭಿಮತ ವ್ಯಕ್ತಪಡಿಸಿದರು. 

  ತಾಲೂಕಿನ ಭೀಮಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ಸಹಯೋಗದೊಂದಿಗೆ ಸೋಮವಾರ ಜರುಗಿದ ‘71ನೇ ಅಖಿಲ ಭಾರತ ಸಹಕಾರ ಸಪ್ತಾಹ’ದಲ್ಲಿ ಸಹಕಾರ ಚಳುವಳಿಯ ಪಿತಾಮಹ ಸಿದ್ದನಗೌಡ ಸಣ್ಣರಾಮನಗೌಡ ಪಾಟೀಲ್‌ರ ಭಾವಚಿತ್ರಕ್ಕೆ ಪುಷ್ಪನಮನ ಹಾಗೂ ಸಹಕಾರಿ ಧುರೀಣರಿಗೆ ಸತ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

  ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ.ಪಾಟೀಲ ಹಾಗೂ ಮಾಜಿ ಸೈನಿಕ ರೇಣುಕಾಚಾರ್ಯ ಸ್ಥಾವರಮಠ ಮಾತನಾಡಿ, ಸಹಕಾರಿ ಸಂಸ್ಥೆಗಳ ಮಹತ್ವದ ಬಗ್ಗೆ ವ್ಯಾಪಕವಾದ ಜನಜಾಗೃತಿ ಮೂಡಬೇಕು. ರೈತರು, ಜನಸಾಮಾನ್ಯರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ನೀಡುತ್ತವೆ. ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಈ ಕೇತ್ರವನ್ನು ರಾಜಕೀಯ ಮುಕ್ತವಾಗಿ ಬೆಳೆಸಿದರೆ, ಇನ್ನೂ ಹೆಚ್ಚಿನ ಜನರಿಗೆ ಅನಕೂಲವಾಗಲು ಸಾಧ್ಯವಾಗುತ್ತದೆ. ಸಹಕಾರ ಸಂಘಗಳು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಬೇಕು. ಸರ್ಕಾರದ ವಿವಿಧ ಯೋಜನೆಗಳನ್ನು ಸದುಪಯೋಗಮಾಡಿಕೊಳ್ಳಬೇಕು ಎಂದರು.

 ಕಾರ್ಯಕ್ರಮದಲ್ಲಿ ಸಕ್ಸಸ್ ಕಂಪ್ಯೂಟರ ತರಬೇತಿ ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್, ಶಿಕ್ಷಕ ಗೋಪಾಲ ರಾಠೋಡ, ಪತ್ತಿನ ಸಂಘದ ಉಪಾದ್ಯಕ್ಷ ವಿಠಲ ಎಲ್.ಗೌಳಿ, ನಿರ್ದೇಶಕರುಗಳಾದ ನೀಲಕಂಠ ಎಂ.ಮಂಗಾಮಳ್ಳಿ, ಮಹಾದೇವಪ್ಪ ಎಸ್.ಜಮಾದಾರ, ಮಹ್ಮದ್ಸಾಬ್ ಮಡಕಿ, ಅಬ್ದುಲ್ ರೆಹಮಾನ್, ಶರಣಮ್ಮ ಗುತ್ತೇದಾರ, ಪೀರಮ್ಮ ಪೂಜಾರಿ, ವಿಶ್ವನಾಥ ಪೂಜಾರಿ, ಚಂದ್ರಶ್ಯಾ ಸುತ್ತೇನೂರ್, ಕಾರ್ಯದರ್ಶಿ ವೀರಯ್ಯಸ್ವಾಮಿ, ಸಿಬ್ಬಂದಿ ಜಗದೇವಿ ಜಿಲ್ಲಿ ಸೇರಿದಂತೆ ಇನ್ನಿತರರಿದ್ದರು.