ವಿದ್ಯಾರ್ಥಿಗಳು ಪುಸ್ತಕ ಓದುವ ಸಂಸ್ಕೃತಿ ಬೆಳೆಸಿಕೊಳ್ಳಿ - ಮರುಳ ಮಹಾಂತ ಶ್ರೀಗಳು
ವಿದ್ಯಾರ್ಥಿಗಳು ಪುಸ್ತಕ ಓದುವ ಸಂಸ್ಕೃತಿ ಬೆಳೆಸಿಕೊಳ್ಳಿ - ಮರುಳ ಮಹಾಂತ ಶ್ರೀಗಳು
ಶಹಪುರ : ವಿದ್ಯಾರ್ಥಿಗಳು ಪುಸ್ತಕಗಳಲ್ಲಿರುವ ನೈತಿಕ ಮೌಲ್ಯಗಳು ಅರ್ಥೈಸಿಕೊಂಡು ಬದುಕಿನಲ್ಲಿ ಅಳವಡಿಸಿಕೊಳ್ಳುವುದರ ಜೊತೆಗೆ ಪುಸ್ತಕ ಓದುವ ಸಂಸ್ಕೃತಿ ಬೆಳೆಸಿಕೊಳ್ಳಬೇಕು ಎಂದು ಒಕ್ಕಲಿಗರ ಹಿರೇಮಠದ ಮರುಳ ಮಹಾಂತ ಶಿವಾಚಾರ್ಯರು ಹೇಳಿದರು.
ತಾಲೂಕಿನ ಸಗರ ಗ್ರಾಮದ ಸಾರ್ವಜನಿಕ ಗ್ರಂಥಾಲಯದಲ್ಲಿ ಹಮ್ಮಿಕೊಂಡಿರುವ ಗ್ರಂಥಾಲಯ ಸಪ್ತಾಹ ದಿನಾಚರಣೆಯ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.ಅಲ್ಲದೆ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಜ್ಞಾನದ ಅವಶ್ಯಕತೆ ಪ್ರಮುಖವಾಗಿದ್ದು ಅದನ್ನು ಪ್ರತಿಯೊಬ್ಬರೂ ಅರ್ಥೈಸಿಕೊಳ್ಳುವ ಕಾರ್ಯಕ್ಕೆ ಮುಂದಾಗಬೇಕು ಎಂದು ನಡೆದರು.
ನಾಗಠಾಣ ಹಿರೇಮಠದ ಸೋಮೇಶ್ವರ ಶಿವಾಚಾರ್ಯರು ಮಾತನಾಡಿ ಗ್ರಂಥಾಲಯಗಳು ಜೀವಂತ ದೇವಾಲಯಗಳಿದ್ದಂತೆ ಸುಸಜ್ಜಿತವಾದ ಗ್ರಂಥಾಲಯದ ಕಟ್ಟಡ,ಉತ್ತಮವಾದ ಪರಿಸರ ವಾತಾವರಣ ನಿರ್ಮಾಣವಿದ್ದು ಇದರ ಸದುಪಯೋಗ ವಿದ್ಯಾರ್ಥಿಗಳು ಪಡೆದುಕೊಂಡು ಕೊಳ್ಳಬೇಕೆಂದು ಸಲಹೆ ನೀಡಿದರು.
ಈ ಸಮಾರಂಭದ ವೇದಿಕೆಯ ಮೇಲೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಗಿರೀಶ್ ಸಿದ್ರಾ ಗ್ರಾಮ ಪಂಚಾಯಿತಿ ಸದಸ್ಯರಾದ ಸಂಗಮೇಶ್ ಕನಗೊಂಡ, ಗ್ರಂಥಪಾಲಕ ಈಶ್ವರಾದ್ಯ ದೇಸಾಯಿಮಠ,ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕಾಳಪ್ಪ ಶಿಕ್ಷಕ ಚಂದಣ್ಣ ಚಡಗುಂಡ,ಜಿಲ್ಲಾ ಸಂಯೋಜಕ ಶಿವು ಹಾದಿಮನಿ,ಶಿವಪ್ಪ ರಸ್ತಾಪುರ,ಚಂದ್ರಗಿರಿ ಹತ್ತಿಗೂಡುರ, ಮಾಳಿಂಗರಾಯ ಕೊಂಕಲ್,ಶಂಕರಗೌಡ ಅಣಬಿ ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು ಸೇರಿದಂತೆ ಇತರರು ಉಪಸಿತರಿದ್ದರು.