ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ
ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ
ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ಕಲಾ, ವಾಣಿಜ್ಯ, ಹಾಗೂ ವಿಜ್ಞಾನ ವಿಭಾಗದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತಿಸುವ ಕಾರ್ಯಕ್ರಮವನ್ನು ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಆಯೋಜಿಸಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಪ್ರೊ ರೋಹಿಣಿಕುಮಾರ್ ಹಿಳ್ಳಿ ವಹಿಸಿದ್ದರು.ಕಾಲೇಜಿನ ಸಾಂಸ್ಕೃತಿಕ ವಿಭಾಗದ ಸಂಯೋಜಕಿ ಡಾ ಮೈತ್ರಾದೇವಿ ಹಳೆಮನಿ,ಡಾ ನೀಲಕಂಠ ವಾಲಿ,ಡಾ ಜಯಶ್ರೀ ಬಡಿಗೇರ ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ನಾಗರತ್ನ ಕಾರ್ಯಕ್ರಮ ನಿರೂಪಿಸಿದರು. ಶ್ವೇತಾ ಬಿ ಸ್ವಾಗತಿಸಿ ವಂದಿಸಿದರು.