ಸಾಹಿತ್ಯ ಸಂವರ್ಧಕ ಪ್ರಶಸ್ತಿ' ಪ್ರದಾನ ಇಂದು

ಸಾಹಿತ್ಯ ಸಂವರ್ಧಕ ಪ್ರಶಸ್ತಿ' ಪ್ರದಾನ ಇಂದು

ಕಮಲನಗರ| ಸಾಹಿತ್ಯ ಸಂವರ್ಧಕ ಪ್ರಶಸ್ತಿ' ಪ್ರದಾನ ಇಂದು 

 ಕಮಲನಗರ.

ಕನ್ನಡ ಸಾಹಿತ್ಯ ಪರಿಷತ್ತು ಔರಾದ ಹಾಗೂ ಕಮಲನಗರ ತಾಲೂಕು ಘಟಕದ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ನ.೨೧ರ ಬೆಳಗ್ಗೆ ೧೧ ಗಂಟೆಗೆ ಔರಾದ(ಬಿ) ತಾಪಂ ಕಛೇರಿ ಸಭಾಂಗಣದಲ್ಲಿ ನಡೆಯಲಿರುವ ಸಾಹಿತಿ ಸಂಗಮ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ.ಚವ್ಹಾಣ ಅವರಿಗೆ 'ಸಾಹಿತ್ಯ ಸಂವರ್ಧಕ ಪ್ರಶಸ್ತಿ' ವಿತರಿಸಲಾಗುತ್ತಿದೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಡಾ.ಶಾಲೀವಾನ್ ಉದಗೀರೆ ತಿಳಿಸಿದ್ದಾರೆ.

ರಾಜ್ಯದ ಗಡಿಭಾಗವಾದ ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ಮರಾಠಿ ಮತ್ತು ತೆಲುಗು ಭಾಷೆಯ ಪ್ರಭಾವ ಹೆಚ್ಚಿನ ಪ್ರಮಾಣದಲ್ಲಿದೆ. ಈ ಭಾಗದಲ್ಲಿ ಕನ್ನಡವನ್ನು ಉಳಿಸಿ ಬೆಳೆಸಲು ಶಾಸಕರಾದ ಪ್ರಭು ಚವ್ಹಾಣ ಅವರು ತಮ್ಮದೇ ರೀತಿಯಲ್ಲಿ ನಿರಂತರ ಶ್ರಮಿಸುತ್ತಿದ್ದಾರೆ.

ಅವರು ಮರಾಠಿ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡಿದ್ದರೂ ಕೂಡ ಕನ್ನಡವನ್ನು ಕಲಿತು ಕ್ಷೇತ್ರದಲ್ಲೆಡೆ ಕನ್ನಡ ವಾತಾವರಣ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ಶಾಸಕರಾದ ನಂತರ ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳ ಬಹುತೇಕ ಎಲ್ಲ ಗ್ರಾಮಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳನ್ನು ತೆರೆಯಲಾಗಿದೆ. ಕನ್ನಡ ಭಾಷಾ ಶಿಕ್ಷಕರನ್ನು ತಂದು ಇಲ್ಕಿನ ಮಕ್ಕಳು ಕನ್ನಡ ಮಾಧ್ಯಮದಲ್ಲಿ ಓದುವಂತಹ ವಾತಾವರಣ ನಿರ್ಮಿಸಿದ್ದಾರೆ.

ಅವರು ಸಚಿವರಾದ ನಂತರ ಪ್ರತಿ ವರ್ಷ ಕನ್ನಡ ರಾಜ್ಯೋತ್ಸವದ ದಿನದಂದು 'ಸಾಹಿತಿ ಸಂಗಮ' ಎನ್ನುವ ವಿನೂತನ ಕಾರ್ಯಕ್ರಮ ಆಯೋಜಿಸಿ ಕನ್ನಡದ ಸಾಹಿತಿಗಳು ಮತ್ತು ಕಲಾವಿದರ ಮನೆಗೆ ತೆರಳಿ ಪುಸ್ತಕಗಳನ್ನು ವಿತರಿಸಿ ಗೌರವಿಸುವ ಕೆಲಸ ಮಾಡುತ್ತಾ ಬರುತ್ತಿದ್ದಾರೆ. ಔರಾದನಲ್ಲಿ ಮೊದಲ ಬಾರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಕಛೇರಿಯನ್ನು ತೆರೆದಿದ್ದಾರೆ. ಜಿಲ್ಲಾ ಕನ್ನಡ ಭವನ ನಿರ್ಮಾಣಕ್ಕೆ ಅವಶ್ಯಕ ಅನುದಾನ ತಂದು ಭವ್ಯ ಕಟ್ಟಡ ನಿರ್ಮಾಣಕ್ಕೆ ಕಾರಣರಾಗಿದ್ದಾರೆ. ಇಂತಹ ಕನ್ನಡ ಪ್ರೇಮಿ ಶಾಸಕರಿಗೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸಾಹಿತ್ಯ ಸಂವರ್ಧನ ಪ್ರಶಸ್ತಿ ನೀಡುತ್ತಿರುವುದಕ್ಕೆ ಸಂತೋಷವಾಗುತ್ತಿದೆ. ನ.21ರಂದು ನಡೆಯಲಿರುವ ಸಾಹಿತಿ ಸಂಗಮ ಹಾಗೂ ಸಾಹಿತ್ಯ ಸಂವರ್ಧನ ಪ್ರಶಸ್ತಿ ವಿತರಣೆ ಕಾರ್ಯಕ್ರಮಕ್ಕೆ ಕನ್ನಡ ಸಾಹಿತಿಗಳು, ಕಲಾವಿದರು ಹಾಗೂ ಎಲ್ಲ ಕನ್ನಡ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕಸಾಪ ತಾಲ್ಲೂಕು ಅಧ್ಯಕ್ಷ ಡಾ.ಶಾಲೀವಾನ್ ಉದಗೀರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.