ಜಯನಗರ ಶಿವಮಂದಿರದಲ್ಲಿ ನ.24 ರಂದು ಉಚಿತ ಕಣ್ಣಿನ ತಪಾಸಣೆ ಶಿಬಿರ

ಜಯನಗರ ಶಿವಮಂದಿರದಲ್ಲಿ ನ.24 ರಂದು ಉಚಿತ ಕಣ್ಣಿನ ತಪಾಸಣೆ ಶಿಬಿರ

ಜಯನಗರ ಶಿವಮಂದಿರದಲ್ಲಿ ನ.24 ರಂದು ಉಚಿತ ಕಣ್ಣಿನ ತಪಾಸಣೆ ಶಿಬಿರ

ಅನುಗ್ರಹ ಕಣ್ಣಿನ ಆಸ್ಪತ್ರೆ ಹಾಗೂ ಜಯನಗರ ಶಿವಮಂದಿರ ಅಭಿವೃದ್ಧಿ ಟ್ರಸ್ಟ್ ಸಹಯೋಗದಲ್ಲಿ ನ.24 ಭಾನುವಾರದಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆವರೆಗೆ ಜಯನಗರ ಶಿವಮಂದಿರದಲ್ಲಿ “ಉಚಿತ ಕಣ್ಣಿನ ತಪಾಸಣೆ ಶಿಬಿರ”ಹಮ್ಮಿಕೊಳ್ಳಲಾಗಿದೆ ಎಂದು ಜಯನಗರ ಶಿವಮಂದಿರ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಲಿಂಗರಾಜ ಸಿರಗಾಪೂರ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುವ ಅವರು ಅನುಗ್ರಹ ಕಣ್ಣಿನ ಆಸ್ಪತ್ರೆಯ,ವೈದ್ಯರು,ನುರಿತ ತಜ್ಞರು ಈ ಶಿಬಿರದಲ್ಲಿ ಉಚಿತವಾಗಿ ಕಣ್ಣಿನ ತಪಾಸಣೆ ನಡೆಸಿ ಸ್ಥಳದಲ್ಲೆ ಚಿಕಿತ್ಸೆ ನೀಡುವರು.ಕಣ್ಣಿನ ಸಮಸ್ಯೆ ಇದ್ದವರು ಈ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉಚಿತವಾಗಿ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಇದರ ಲಾಭ ಪಡೆಯಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.ಹೆಚ್ಚಿನ ಮಾಹಿತಿಗಾಗಿ 

ಮೊ.ಸಂಖ್ಯೆ:9481961505,9483146452 ಸಂಪರ್ಕಿಸಲು ಕೋರಲಾಗಿದೆ.