ಬೈ ಎಲೆಕ್ಷನ್ ,ಕಲಬುರಗಿ ಕಾಂಗ್ರೆಸ್ ಕಚೇರಿಯಲ್ಲಿ ವಿಜಯೋತ್ಸವ
ಬೈ ಎಲೆಕ್ಷನ್ ,ಕಲಬುರಗಿ ಕಾಂಗ್ರೆಸ್ ಕಚೇರಿಯಲ್ಲಿ ವಿಜಯೋತ್ಸವ
ಕಲಬುರಗಿ : ರಾಜ್ಯದ ಮೂರು ಕ್ಷೇತ್ರಗಳಿಗೆ ನಡೆದ ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಜಯಗಳಿಸಿದ ಹಿನ್ನೆಲೆಯಲ್ಲಿ ಇಂದು ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ವಿಜಯೋತ್ಸವ ಆಚರಿಸಿದರು.
ವಿಧಾನ ಪರಿಷತ್ ಸದಸ್ಯ ಹಾಗೂ ಕಲಬುರ್ಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ್ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಜನತೆಗೆ ನೀಡಿರುವ ಗ್ಯಾರೆಂಟಿ ಫಲವಾಗಿ ,ಉಪಚುನಾವಣೆಯಲ್ಲಿ ಜನರು ನೀಡಿರುವ ತೀರ್ಪು ಎಂದು ಹರ್ಷ ವ್ಯಕ್ತಪಡಿಸಿದರು
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ ಹಾಗೂ ಕಾರ್ಯಕರ್ತರ ಹೋರಾಟದಿಂದ ಈ ಗೆಲುವು ಸಾಧಿಸಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ, ಮಾಜಿ ಸಚಿವ ರೇವು ನಾಯಕ್ ಬೆಳಮಗಿ, ಚಂದ್ರಿಕಾ ಪರಮೇಶ್ವರಿ, ನಿರ್ಮಲ ಬರಲಿ, ಸೇರಿದಂತೆ ಜಿಲ್ಲೆಯ ಕಾರ್ಯಕರ್ತರು ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.