ಜಗತ್ತಿನ ಶ್ರೇಷ್ಠ ಸಂವಿಧಾನ: ಡಾ. ಕೊಂಡಾ
ಜಗತ್ತಿನ ಶ್ರೇಷ್ಠ ಸಂವಿಧಾನ: ಡಾ. ಕೊಂಡಾ
ಕಲಬುರಗಿ: ಜಗತ್ತಿನ ಅತಿ ದೊಡ್ಡ ಲಿಖಿತ ಸಂವಿಧಾನವೆಂದರೆ ಅದುವೇ ಭಾರತೀಯ ಸಂವಿಧಾನ. 2015ರಿಂದ ಪ್ರತಿವರ್ಷ ನವೆಂಬರ್ 26ರಂದು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ. ಈ ವಿಶೇಷ ದಿನದಂದು ದೇಶದ ಎಲ್ಲ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ಮತ್ತು ಕೆಲವು ಕಡೆ ಸಾರ್ವಜನಿಕ ಸ್ಥಳಗಳಲ್ಲಿ ಸಂವಿಧಾನ ದಿನವನ್ನು ಆಚರಿಸುತ್ತಾರೆ. ಈ ವಿಶೇಷ ದಿನದಂದು ಭಾರತೀಯ ಸಂವಿಧಾನದ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಜನರಿಗೆ ಅರಿವು ಮೂಡಿಸಲಾಗುತ್ತದೆ ಎಂದು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ರಾಜೇಂದ್ರ ಕೊಂಡಾ ನುಡಿದರು.
ಸಂವಿಧಾನ ದಿನ ಕಾರ್ಯಕ್ರಮದಲ್ಲಿ ರಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಗೀತಾ ಪಾಟೀಲ ರವರು ಸಂವಿಧಾನದ ಪೀಠಿಕೆಯನ್ನು ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಓದಿಸಿದರು.
ಈ ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಡಾ. ಮೋಹನರಾಜ ಪತ್ತಾರ, ಡಾ. ವೀಣಾ ಎಚ್. ಡಾ. ಉಮಾ ಆರ್. ಡಾ. ಮಹೇಶ ಜಿ. ಡಾ. ಪ್ರೇಮಚಂದ ಚವ್ಹಾಣ, ಶರಣಪ್ಪ ಮುಸ್ತಲ್ಲಿ ಹಾಗೂ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯದ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.