ಕಲಬುರಗಿ:ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮ

ಕಲಬುರಗಿ:ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮ

ಕಲಬುರಗಿ:ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮ 

ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿ ಹಾಗೂ ಸಿ.ಆರ್.ಸಿ ಸ್ನೇಹ ಬಳಗ ಕಲಬುರಗಿ ಮತ್ತು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನುವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ಪದ್ಮಶ್ರೀ ಪುರಸ್ಕೃತರಾದ ಡಾ. ಸಿ.ಆರ್ ಚಂದ್ರಶೇಖರ ಅವರು "ಕಲಿಕೆ, ಓದು ಮತ್ತು ನೆನಪು" ಎಂಬ ವಿಷಯವನ್ನು ಕುರಿತು ವಿಶೇಷ ಉಪನ್ಯಾಸ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ಮಂಡಿಸಿದರು. ಇಂದಿನ ಯುವಕರು ಆರೋಗ್ಯವನ್ನು ಕಾಪಾಡಿಕೊಂಡು ಎಚ್ಚರವಹಿಸಿಬೇಕು. ಜೀವನವನ್ನು ಸುಲಭವಾಗಿ ಕಳೆಯಬೇಕು ದೈಹಿಕ ಹಾಗೂ ಮಾನಸಿಕವಾಗಿ ಸದೃಢತೆಯನ್ನು ಹೊಂದಿರಬೇಕು. ಇತ್ತೀಚಿನ ಆಧುನಿಕ ದಿನಮಾನಗಳಲ್ಲಿ ಬದುಕುವ ವೈರ‍್ಯ ತುಂಬಾ ವಿಭಿನ್ನವಾಗಿದೆ ಎಂದರು. ವಿದ್ಯಾರ್ಥಿಗಳಾದವರು ಓದುವುದು, ಬರೆಯುವುದು, ಗ್ರಹಿಸುವುದರ ಬಗ್ಗೆ ಹೆಚ್ಚು ಗಮನವಹಿಸಬೇಕು ಎಂದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸವಿತಾ ತಿವಾರಿ ಅವರು ಅಧ್ಯಕ್ಷತೆಯನ್ನು ವಹಿಸಿದರು. ಈ ಕಾರ್ಯಕ್ರಮದಲ್ಲಿ ಡಾ. ದವಲಪ್ಪ ಬಿ.ಎಚ್, ಡಾ. ಶಶಿಶೇಖರರೆಡ್ಡಿ, ಡಾ. ಸುರೇಶ ಮೂಳೇಗಾಂವ, ಡಾ. ಬಲಭೀಮ ಸಾಂಗ್ಲಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಪ್ರಾಧ್ಯಾಪಕರು ಸಿಬ್ಬಂದಿತೇರ ವರ್ಗದವರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು

.