ನಾಡೋಜ ಡಾ. ಗೊ. ರು. ಚನ್ನಬಸಪ್ಪ ಅವರಿಗೆ ಅಭಿನಂದನಾ ಸಮಾರಂಭ
ನಾಡೋಜ ಡಾ. ಗೊ. ರು. ಚನ್ನಬಸಪ್ಪ ಅವರಿಗೆ ಅಭಿನಂದನಾ ಸಮಾರಂಭ
ಕಲಬುರಗಿ : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ, ಕಲಬುರಗಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಲಬುರಗಿ ಇವರ ಸಹಯೋಗದಲ್ಲಿ
ದಿನಾಂಕ : 29.11.2024, ಶುಕ್ರವಾರ, ಸಮಯ ಮುಂಜಾನೆ 11.00 ಗಂಟೆಗೆ ಕಲಬುರಗಿ ಕನ್ನಡ ಭವನದಲ್ಲಿ, ಅಭಿನಂದನ ಕಾರ್ಯಕ್ರಮ ಜರುಗಲಿಗೆ ಎಂದು ಡಾ. ಮಲ್ಲಿಕಾರ್ಜುನ್ ವಡ್ಡನಕೇರಿ ಹೇಳಿದರು.
ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಗೊಂಡ ನಾಡೋಜ ಡಾ.ಗೊ.ರು. ಚನ್ನಬಸಪ್ಪ ಅವರಿಗೆ ಅಭಿನಂದಿಸಿ ಗೌರವಿಸಲಾಗುವುದು ಎಂದರು
ಕಾರ್ಯಕ್ರಮದಲ್ಲಿ ಶ್ರೀ ಮ. ನಿ. ಪ್ರ. ಡಾ. ಪೂಜ್ಯ ಶಿವಾನಂದ ಮಹಾಸ್ವಾಮಿಗಳು ವಿರಕ್ತ ಮಠ, ಸೊನ್ನ ಸಾನಿಧ್ಯ ವಹಿಸಲಿದ್ದಾರೆ. ಡಾ. ವೀರಣ್ಣ ದಂಡೆ ಅವರು ಅಭಿನಂದನಾ ನುಡಿ ಆಡಲಿದ್ದಾರೆ.
ಧಾರವಾಡ ನಿವೃತ್ತ ಪ್ರಾಧ್ಯಾಪಕರಾದ ಡಾ. ವೀರಣ್ಣ ರಾಜೂರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕಲಬುರಗಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ ವಡ್ಡನಕೇರಿ, ಹಾಗೂ ಕಸಾಪ ಅಧ್ಯಕ್ಷರಾದ ಶ್ರೀ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರು ಗೌರವ ಉಪಸ್ಥಿತಿ ವಹಿಸಲಿದ್ದಾರೆ.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಹಿರಿಯ ಉಪಾಧ್ಯಕ್ಷರಾದ ಶ್ರೀ ಅಪ್ಪಾರಾವ ಅಕ್ಕೋಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕ.ಸಾ.ಪ ಪದಾಧಿಕಾರಿಗಳಾದ.ಶಿವರಾಜ ಎಸ್. ಅಂಡಗಿ,ಧರ್ಮಣ್ಣ ಎಚ್. ಧನ್ನಿ ,ಶರಣರಾಜ ಛಪ್ಪರಬಂದಿ.ಹಾಗೂ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ ಶಾಂತಲಿಂಗ ಪಾಟೀಲ ಕೋಳಕೂರ, ಡಾ. ಶಾಂತಾ ಬಿ. ಅಷ್ಠಗಿ,ವಿಶ್ವನಾಥ ಮಂಗಲಗಿ, ಹಾಗೂ ಗೊ.ರು.ಚ. ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.