ದೇಶದ ಎಲ್ಲಾ ಜಾತಿ ಜನಾಂಗದ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸಂವಿಧಾನ ರಚನೆ: ಡಾ. ಕೆ.ಎಸ್. ಬಂಧು

ದೇಶದ ಎಲ್ಲಾ ಜಾತಿ ಜನಾಂಗದ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸಂವಿಧಾನ ರಚನೆ: ಡಾ. ಕೆ.ಎಸ್. ಬಂಧು

ದೇಶದ ಎಲ್ಲಾ ಜಾತಿ ಜನಾಂಗದ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸಂವಿಧಾನ ರಚನೆ: ಡಾ. ಕೆ.ಎಸ್. ಬಂಧು

ಕಲಬುರಗಿ: ಶಹಾಬಾದ ತಾಲೂಕಿನ ಮರತೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ ಪ್ರಯುಕ್ತವಾಗಿ ಪ್ರೇರಣಾ ಗ್ರಾಮೀಣ ಅಭಿವೃದ್ಧಿ ಟ್ರಸ್ಟ್(ರಿ) ಉದ್ಘಾಟನೆ ಹಾಗೂ ಸಂವಿಧಾನದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ದೈಹಿಕ ಶಿಕ್ಷಕರಾದ ಮಲ್ಲಿಕಾರ್ಜುನ ಸಿಂಗೆ ಹಾಗೂ ನಿವೃತ್ತ ಉಪನ್ಯಾಸಕ ಡಾ. ಕೆ. ಎಸ್. ಬಂಧು ಸಿದ್ದೇಶ್ವರ ಅವರು ಜಂಟಿಯಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ನಂತರ ಸಂವಿಧಾನದ ಕುರಿತು ಡಾ. ಕೆ ಎಸ್ ಬಂದು ಸಿದ್ದೇಶ್ವರ ಅವರು ವಿಶೇಷ ಉಪನ್ಯಾಸ ನೀಡಿದರು.

ಡಾ. ಬಿ. ಆರ್ ಅಂಬೇಡ್ಕರ್ ರವರು 1949 ನವೆಂಬರ್ 26ರಂದು ದೇಶಕ್ಕೆ ಸಂವಿಧಾನವನ್ನು ಸಮರ್ಪಣೆ ಮಾಡಿದರು. ಆದರೆ, ಜನವರಿ 26, 1950 ರಂದು ಸಂವಿಧಾನ ಜಾರಿಗೆ ಬಂತು. ಬಾಬಾ ಸಾಹೇಬರು ಕೇವಲ ದಲಿತರಿಗೆ ಸಂವಿಧಾನವನ್ನು ಬರೆದು ಕೊಟ್ಟಿಲ್ಲ. ಇಡೀ ದೇಶದ ಸರ್ವಧರ್ಮ ಹಾಗೂ ಎಲ್ಲಾ ಜಾತಿ ಜನಾಂಗದ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸಂವಿಧಾನವನ್ನು ರಚನೆ ಮಾಡಿದ್ದಾರೆ ಎಂದರು.

 ಈ ದೇಶದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಅನೇಕ ಕಾನೂನುಗಳನ್ನು ತಂದವರು ಡಾ. ಭೀಮರಾವ್ ಅಂಬೇಡ್ಕರ್ ಅವರು. ಭಾರತೀಯ ಎಲ್ಲಾ ಹೆಣ್ಣು ಮಕ್ಕಳ ಸಮಾನ ಹಕ್ಕಿಗಾಗಿ ಹಿಂದೂ ಕೋಡ್ ಬಿಲ್ ಅನ್ನು ಲೋಕಸಭೆಯಲ್ಲಿ ಮಂಡಿಸಿದರು. ಆದರೆ ಅದು ಜಾರಿಯಾಗದ ಕಾರಣ ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಏಕೈಕ ವ್ಯಕ್ತಿ ಡಾ. ಅಂಬೇಡ್ಕರ್ ಅವರಾಗಿದ್ದು, ಇದು ಅವರಿಗಿರುವ ಮಹಿಳಾ ಪರ ಕಾಳಜಿ ತೋರಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲೆಯ ಮುಖ್ಯ ಗುರುಗಳಾದ ಮನೋಹರ್ ಪೊದ್ದಾರ ಮಾತನಾಡಿ, ಇಡೀ ವಿಶ್ವದಲ್ಲಿಯೇ ಭಾರತದ ಸಂವಿಧಾನ ಅತ್ಯಂತ ಶ್ರೀಮಂತ ಸಂವಿಧಾನವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶಿಕ್ಷಕರಾದ ರಾಜಶೇಖರ ಪಾಟೀಲ ಕವಿತಾ ಮರಗೋಳ, ದೌಲತರಾಯ ಭಂಟನೂರ್, ಲಕ್ಷ್ಮಣರಾವ್ ಹಾಗೂ ಸಂಸ್ಥೆಯ ಖಜಾಂಚಿ ಜಗನ್ನಾಥ ಕೌಲಗಾ, ಉಪಾಧ್ಯಕ್ಷ ರಸೂಲ್ ಕಡಗಂಚಿ, ಉಪಸ್ಥಿತರಿದ್ದರು. 

ಸಂಸ್ಥೆಯ ಅಧ್ಯಕ್ಷ ಭೀಮಾಶಂಕರ ಕಂಬಾನೋರ್ ಸ್ವಾಗತಿಸಿ, ಪ್ರಸ್ತಾವಿಕ ಮಾತನಾಡಿದರು. ಶಿಕ್ಷಕರಾದ ಕುಪೇಂದ್ರ ನಿರೂಪಿಸಿದರು. ಸಂಸ್ಥೆಯ ಕಾರ್ಯದರ್ಶಿ ರಾಜಕುಮಾರ ಸರಡಗಿ ವಂದಿಸಿದರು.