ಡಾ, ಮಲ್ಲಿಕಾರ್ಜುನ ಎಸ್ ನಾಸಿಯವರಿಗೆ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಡಾ, ಮಲ್ಲಿಕಾರ್ಜುನ ಎಸ್ ನಾಸಿಯವರಿಗೆ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಕಲಬುರಗಿ: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಕೊಡಮಾಡುವ ಪ್ರತಿಷ್ಠಿತ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಕೇರಳದ ಹಿರಿಯ ವೈದ್ಯ ಹಾಗೂ ಮೂಲತಃ ಕಲಬುರ್ಗಿಯವರಾದ ಶ್ರೇಷ್ಠ ಹೊರನಾಡ ಕನ್ನಡಿಗ ಪ್ರಶಸ್ತಿ ಪುರಸ್ಕೃತ ಡಾ ಮಲ್ಲಿಕಾರ್ಜುನ ಎಸ್ ನಾಸಿ ಆಯ್ಕೆಯಾಗಿದ್ದಾರೆ
ಮೂಲತಃ ಕಲಬುರ್ಗಿ ಜಿಲ್ಲೆಯವರಾದ ನಾಸಿಯವರು ಇಲ್ಲಿನ ಎಸ್ ಬಿ ಆರ್ ಶಾಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸವನ್ನು ಪೂರೈಸಿ ಎಂ ಆರ್ ಮೆಡಿಕಲ್ ಕಾಲೇಜಿನಲ್ಲಿ ಎಂ ಬಿ ಬಿ ಎಸ್ ಪೂರೈಸಿ 2004ರಲ್ಲಿ ಕೇರಳದ ಕೊಚ್ಚಿನ್ ಗೆ ಆಗಮಿಸಿದರು.2016ರಲ್ಲಿ ಪೋತನಿಕ್ಕಾಡ್ ನಲ್ಲಿ ಸೈನ್ಟ್ ಮೇರಿಸ್ ಎಂಬ ಆಸ್ಪತ್ರೆಯನ್ನು ತೆರೆದು ಇಲ್ಲಿ ಜನಾನುರಾಗಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ
ಈ ಪ್ರದೇಶದಲ್ಲಿರುವ ಕನ್ನಡ ಭಾಷಿಗರನ್ನುಒಗ್ಗೂಡಿಸಿ ಅವರಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಕಲೆಗಳನ್ನು ಬೆಳೆಸಲು ನಿರಂತರ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ, ಕನ್ನಡ ಮತ್ತು ಮಲೆಯಾಲ ಭಾಷಾ ಸೌಹಾರ್ದ ತೆಗೆ ಹೆಚ್ಚಿನ ಕೊಡುಗೆ ನೀಡಿದ್ದಾರೆ
ಇವರ ಕನ್ನಡಪರ ಸೇವೆಯನ್ನು ಗುರುತಿಸಿ ಕರ್ನಾಟಕ ಸರಕಾರದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ಕಳೆದ ಜುಲೈ ತಿಂಗಳಲ್ಲಿ ಮುಂಬೈನಲ್ಲಿ ನಡೆದ ಹೊರನಾಡ ಕನ್ನಡ ಸಂಸ್ಕೃತಿ ಸಮ್ಮೇಳನ ದಲ್ಲಿ ಶ್ರೇಷ್ಠ ಹೊರನಾಡ ಕನ್ನಡಿಗ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ ಕೇರಳದ ಅನೇಕ ಸಂಘ ಸಂಸ್ಥೆಗಳು ಇವರ ಜನಪರ ಸೇವೆಯನ್ನು ಗುರುತಿಸಿ ಗೌರವಿಸಿದೆ ಇತ್ತೀಚಿಗೆ ಕೇರಳದ ರಾಜಧಾನಿ ತಿರುವನಂತಪುರದ ಭಾರತ್ ಭವನದಲ್ಲಿ ಕರ್ನಾಟಕ ಸರಕಾರದ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು, ಕರ್ನಾಟಕ ಜಾನಪದ ಪರಿಷತ್ತು ಕೇರಳ ಘಟಕದ ವತಿಯಿಂದ ನಡೆದ ಅನಂತಪುರಿ ಗಡಿನಾಡ ಕನ್ನಡ ಉತ್ಸವದಲ್ಲಿ ಕೇರಳದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಿ ಆರ್ ಅನಿಲ್ ಪ್ರಶಸ್ತಿ ಪ್ರಧಾನಗೈದರು, ವಿಶ್ರಾಂತ ಕುಲಪತಿ ಹಾಗೂ ಕರ್ನಾಟಕ ಜಾನಪದ ಪರಿಷತ್ತು ಅಧ್ಯಕ್ಷ ಹಿ. ಚಿ. ಬೋರಲಿಂಗಯ್ಯ ಅಧ್ಯಕ್ಷತೆ ವಹಿಸಿದರು ಸಮಾರಂಭದಲ್ಲಿ ಶಾಸಕರಾದ ಎನ್ ಎ ನೆಲ್ಲಿಕುನ್ನು, ಎ ಕೆ ಎಂ ಅಶ್ರಫ್, ಕೇರಳ ಸಹಕಾರಿ ಕೃಷಿ ಮತ್ತು ಗ್ರಾಮಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ನ್ಯಾಯವಾದಿ ಸಜಿ ಮೋಹನ್ ತಿರುವನಂತಪುರ ಗ್ರಾಹಕ ತರ್ಕ ಪರಿಹಾರ ಆಯೋಗದ ಅಧ್ಯಕ್ಷ ನ್ಯಾಯವಾದಿ ಪಿ ವಿ ಜಯರಾಜ್, ಮುಂತಾದವರು ಉಪಸ್ಥಿತರಿದ್ದರು