ವಚನ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಬಸವರಾಜ ನೇಮಕ .
ವಚನ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಬಸವರಾಜ ನೇಮಕ
ಕಲಬುರಗಿ : ಕರ್ನಾಟಕ ವಚನ ಸಾಹಿತ್ಯ ಪರಿಷತ್ತಿನ ಕಮಲಾಪುರ ತಾಲೂಕ ಘಟಕದ ಅಧ್ಯಕ್ಷರಾಗಿ ಬಸವರಾಜ ಅಶೋಕಕುಮಾರ ವಡ್ಡನಕೇರಿ ಅವರನ್ನು ನೇಮಿಸಲಾಗಿದೆ ಎಂದು ಜಿಲ್ಲಾಧ್ಯಕ್ಷರಾದ ಶಾಂತಲಿಂಗ ಪಾಟೀಲ ಕೊಳಕೂರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕೂಡಲೇ ತಮ್ಮ ಜವಾಬ್ದಾರಿಯನ್ನು ವಹಿಸಿಕೊಂಡು ಸಂಸ್ಥೆಯ ಸಂಘಟನೆ ಕಾರ್ಯದಲ್ಲಿ ಸಕ್ರೀಯವಾಗಿ ತೊಡಗಿ ಸಂಸ್ಥೆಯನ್ನು ಸದೃಢಗೊಳಿಸಲು ಸಮರ್ಪಣಾ ಭಾವದಿಂದ ಶ್ರಮಿಸಬೇಕೆಂದು ಸೂಚಿಸಿದ್ದಾರೆ .