ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಶಿಕ್ಷಕ : ಯಡ್ರಾಮಿಯಲ್ಲಿ ಪ್ರತಿಭಟನೆ

ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಶಿಕ್ಷಕ : ಯಡ್ರಾಮಿಯಲ್ಲಿ ಪ್ರತಿಭಟನೆ

ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಶಿಕ್ಷಕ : ಯಡ್ರಾಮಿಯಲ್ಲಿ ಪ್ರತಿಭಟನೆ 

ಯಡ್ರಾಮಿ : ಹನ್ನೊಂದು ವರ್ಷದ ಚಿಕ್ಕ ವಯಸ್ಸಿನ ವಿದ್ಯಾರ್ಥಿನಿ ಮೇಲೆಅತ್ಯಾಚಾರಗೈದ ಘಟನೆ ಯಡ್ರಾಮಿ ತಾಲೂಕಿನ ಖಾಸಗಿ ಶಾಲೆಯಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.

ಯಡ್ರಾಮಿ ತಾಲೂಕಿನ ಖಾಸಗಿ ಶಾಲಾ ಮುಖ್ಯಸ್ಥನಾದ ಹಾಜಿಮಲಂಗ ಗಣಿಯಾರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅತ್ಯಾಚಾರ ಘಟನೆ ಖಂಡಿಸಿ, ಆರೋಪಿಗೆ ಉಘ್ರ ಶಿಕ್ಷೆಗೆ ಆಗ್ರಹಿಸಿ ತಾಲೂಕಿನ ಕರವೇ, ರೈತ, ಹಾಗೂ ವಿವಿಧ ಸಂಘಟನೆಗಳು ಯಡ್ರಾಮಿ ಬಂದ್ ಮಾಡಿದ್ದಾರೆ. ಇಂದು ಮಂಗಳವಾರ ಬೆಳಗ್ಗೆಯಿಂದಲೇ ಪ್ರತಿಭಟನೆ ಆರಂಭಿಸಿದ್ದು, ಪಟ್ಟಣದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ಶಾಲೆಯೊಂದರಲ್ಲಿ ಸಂತ್ರಸ್ತ ಮಗು ಕಳೆದ ಎರೆಡು-ಮೂರು ವರ್ಷಗಳಿಂದ ಓದುತ್ತಿದ್ದಾಳೆ. ಸದ್ಯ ಮಗು ಐದನೇ ತರಗತಿ ಓದುತ್ತಿದ್ದು, ಶಾಲೆಯ ಮುಖ್ಯಸ್ಥ ಹಾಜಿಮಲಂಗ ಗಣಿಯಾರ ಕಳೆದ ಎರಡು ದಿನದ ಹಿಂದೆ ಶಾಲೆಯಲ್ಲಿ ಅತ್ಯಾಚಾರಗೈದಿದ್ದಾನೆ.

ಇದಲ್ಲದೆ ಅತ್ಯಾಚಾರದ ವಿಷಯವನ್ನು ಮನೆಯಲ್ಲಿ ಯಾರಿಗಾದರೂ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಮಗು ಮನೆಯಲ್ಲಿ ತಿಳಿಸಲು ಹಿಂಜರಿದಿದೆ. ನಂತರ ಪಕ್ಕದ ಮನೆಯವರ ಮುಂದೆ ಮಗು ವಿಷಯ ತಿಳಿಸಿದ್ದು, ಅವರು ಮಗುವಿನ ತಂದೆ,ತಾಯಿಗೆ ವಿಷಯ ತಿಳಿಸಿದ್ದಾರೆ. ನಂತರ ಸಂತ್ರಸ್ತ ಮಗುವಿನ ಪಾಲಕರು ತಮ್ಮ ಸಮುದಾಯದ ಎಲ್ಲ ಹಿರಿಯರೂ ಚರ್ಚಿಸಿ ಸೋಮವಾರ ಸಾಯಂಕಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವರದಿ ಜಟ್ಟೆಪ್ಪ ಪೂಜಾರಿ