ಬಾಂಗ್ಲಾದೇಶದಲ್ಲಿರುವ ಹಿಂದೂಗಳು ರಕ್ಷಣೆ ಒತ್ತಾಯ

ಬಾಂಗ್ಲಾದೇಶದಲ್ಲಿರುವ ಹಿಂದೂಗಳು ರಕ್ಷಣೆ ಒತ್ತಾಯ

ಬಾಂಗ್ಲಾದೇಶದಲ್ಲಿರುವ ಹಿಂದೂಗಳು ರಕ್ಷಣೆ ಒತ್ತಾಯ

ಕಲಬುರಗಿ:ಬಾಂಗ್ಲಾದೇಶದಲ್ಲಿರುವ ಹಿಂದೂಗಳು ರಕ್ಷಣೆ ಮಾಡಬೇಕು ಎಂದು ಅಂತರರಾಷ್ಟ್ರೀಯ ಹಿಂದೂ ಪರಿಷತ್ ರಾಷ್ಟ್ರೀಯ ಬಜರಂಗ ದಳ ಉತ್ತರ ಪ್ರಾಂತದ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಅದ್ವಾನಿ ಸರಕಾರಕ್ಕೆ ಒತ್ತಾಯಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಮಾತನಾಡಿದ ಅವರು, ಹಿಂದೂ ಮಹಿಳೆಯ ಮೇಲೆ ದೌರ್ಜನ್ಯ, ಹಿಂದೂ ಮನೆಗಳು, ದೇವಾಲಯಗಳು ಮತ್ತು ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂಗಳ ಮೇಲಿನ ದಾಳಿಯನ್ನು ತಡೆಯುವಂತೆ ಬಾಂಗ್ಲಾದೇಶದ ಸೇನೆಗೆ ಭಾರತ ಸರಕಾರವು ನಿರ್ದೇಶನ ನೀಡಬೇಕು. ಅಲ್ಲಿರುವ ಹಿಂದೂಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು, ತಕ್ಷಣವೇ ಅವರಿಗೆ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.

ಭಾರತ ಸರಕಾರ ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆ ಪುರಾತನ ಹಿಂದೂ ದೇವಸ್ಥಾನ, ಬೌದ್ಧ ಮಂದಿರ, ಗುರುದ್ವಾರ ರಕ್ಷಣೆಗಾಗಿ ವಿದೇಶಿ ನೀತಿಯನ್ನು ಅನುಸರಿಸಿ ರಕ್ಷಣೆ ಮಾಡಬೇಕು. ಇದಕ್ಕೆ ದೇಶದ ಎಲ್ಲ ಸಾಧು-ಸಂತರು, ಮಠಾಧೀಶರು ಕೂಡಲೇ ಬಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಭಾರತ ಸರಕಾರಕ್ಕೆ ಒತ್ತಡ ಹೇರಬೇಕು ಎಂದು ಒತ್ತಾಯಿಸಿದರು.

ಕಿಶನ್‌ರಾವ್ ಕುಲಕರ್ಣಿ, ವಿರೇಶ್ ಬಸ್ತಿ, ನಾಗರಾಜ ಮೋರಖಂಡೆ, ಶಿವುಕುಮಾರ ಇತರರಿದ್ದರು.