ಕ್ರೀಡಾಕೂಟದಲ್ಲಿ ಮತ್ತು ವಿವಿಧ ಕ್ಷೇತ್ರಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ

ಕ್ರೀಡಾಕೂಟದಲ್ಲಿ ಮತ್ತು ವಿವಿಧ ಕ್ಷೇತ್ರಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ

ಕ್ರೀಡಾಕೂಟದಲ್ಲಿ ಮತ್ತು ವಿವಿಧ ಕ್ಷೇತ್ರಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ

ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿಯ ವಿದ್ಯಾರ್ಥಿಗಳು ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿಯಲ್ಲಿ ನಡೆಯುವ 2024-25ನೇ ಸಾಲಿನ 43ನೇ ಅಂತರ ಮಹಾವಿದ್ಯಾಲಯಗಳ ವೈಯಕ್ತಿಕ ಹಾಗೂ ಮಹಿಳಾ ಸಮಗ್ರ ಪ್ರಶಸ್ತಿ ಮತ್ತು ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದಿದ್ದಕ್ಕಾಗಿ ವಿಜೇತರಿಗೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. 

ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಕೃಷಿ ವಿಶ್ವವಿದ್ಯಾಲಯ ಕಲಬುರಗಿಯ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಜಕುಮಾರ ಕರವೆ ಅವರು ಆಗಮಿಸಿ, ಇಂದಿನ ವಿದ್ಯಾರ್ಥಿಗಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಸಬಲರಾಗಬೇಕಾದರೆ ಕ್ರೀಡೆಯ ಅವಶ್ಯಕತೆ ಇದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಾಧನೆ ಮಾಡಿದರೆ ಕಾಲೇಜಿಗೂ ಮತ್ತು ಪಾಲಕರಿಗೂ ಅವಿಸ್ಮರಣಿಯವಾಗಿರುತ್ತದೆ. ಅದಕ್ಕಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಬೇಕು ಎಂದರು. 

ಈ ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸವಿತಾ ತಿವಾರಿ ಅವರು ಅಧ್ಯಕ್ಷತೆಯನ್ನು ವಹಿಸಿದರು. ಈ ಕಾಲೇಜಿನ ಕಾರ್ಯಕ್ರಮದಲ್ಲಿ ಡಾ. ವಿಜಯಕುಮಾರ ಸಾಲಿಮನಿ ಅವರು ವಿದ್ಯಾರ್ಥಿಗಳ ಸಾಧನೆಯನ್ನು ಕುರಿತು ಮಾತನಾಡಿದರು. ಈ ಒಂದು ಕಾರ್ಯಕ್ರಮದಲ್ಲಿ ರಾಜಕುಮಾರ ಸಲಗರ, ಡಾ. ದೌಲಪ್ಪ ಬಿ.ಎಚ್, ಡಾ. ಅರುಣಕುಮಾರ, ಡಾ. ಸುರೇಶ ಮಾಳೆಗಾಂವ, ಡಾ. ಬಲಭೀಮ ಸಾಂಗ್ಲಿ, ಡಾ. ಬೆಣ್ಣೂರ ವಿಶ್ವನಾಥ, ಡಾ. ಚಂದ್ರಕಾಂತ ಶಿರೋಳೆ ಹಾಗೂ ಶ್ರೀಮತಿ ವಿಜಯಲಕ್ಷ್ಮಿ ವೇದಿಕೆ ಮೇಲೆ ಉಪಸ್ಥಿತರಿದ್ದರು. ಕ್ರೀಡೆ ಮತ್ತು ಇನ್ನಿತರ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಕಾಲೇಜಿನ ಗೇಟಿನ ಮೂಲಕ ಡೊಲು ಭಾರಿಸುತ್ತ ಕುಣಿಯುತ್ತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮೇರವಣಿಗೆ ಮಾಡಿದರು. ಈ ಕಾರ್ಯಕ್ರಮಕ್ಕೆ ಯಶಸ್ವಿಗೆ ಕಾರಣಿಭೂತರಾದ ಡಾ. ಬೆಣ್ಣೂರು ವಿಶ್ವನಾಥ ಹಾಗೂ ಡಾ. ಚಂದ್ರಕಾಂತ ಶಿರೋಳೆ ಅವರಿಗೆ ಅತಿಥಿಗಣ್ಯರಿಂದ ಸನ್ಮಾನಿಸಲಾಯಿತು. 

ಈ ಒಂದು ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಮಾಣ ಪತ್ರ ಮತ್ತು ನೆನಪಿನ ಕಾಣಿಕೆಯನ್ನು ನೀಡಿ ಸತ್ಕರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್, ಎನ್.ಸಿ.ಸಿ, ಡಾ. ಅಂಬೇಡ್ಕರ ವೇದಿಕೆ ವತಿಯಿಂದ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿ ಸತ್ಕರಿಸಲಾಯಿತು. ನಮ್ಮ ಕಾಲೇಜಿಗೆ ಪ್ರಪ್ರಥಮ ಬಾರಿಗೆ ಕ್ರೀಡಾ ಸಾಧನೆಯಲ್ಲಿ ಮಹಿಳಾ ಸಮಗ್ರ ಪ್ರಶಸ್ತಿ ಮತ್ತು ವೀರಾಗ್ರಣಿ ಪ್ರಶಸ್ತಿ ವಿದ್ಯಾರ್ಥಿಗಳು ಪಡೆದಿದ್ದಕ್ಕಾಗಿ ಇದೊಂದು ಇತಿಹಾಸವಾಗಿದೆ. ಈ ಕಾರ್ಯಕ್ರಮದಲ್ಲಿ ಡಾ. ಶಾಮಲಾ ಸ್ವಾಮಿ ಸ್ವಾಗತ ಗೀತೆ ಹಾಡಿದರು, ಸುರೇಶ ಮಾಳೇಗಾಂವ ಸ್ವಾಗತಿಸಿದರು, ಡಾ. ದವಲಪ್ಪ ಬಿ.ಎಚ್ ವಂದಿಸಿದರು, ಡಾ. ಬಲಭೀಮ ಸಾಂಗ್ಲಿ ನಿರೂಪಿಸಿದರು. 

 ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಪ್ರಾಧ್ಯಾಪಕರು ವೃಂದ, ಅತಿಥಿ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂಧಿ ವರ್ಗದವರು ಮತ್ತು ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದರು. ಈ ಕಾರ್ಯಕ್ರಮವು ವಿಜ್ರಂಭಣೆಯಿಂದ ನೆರವೇರಿತು ಎಂದು ಡಾ. ನಾಗಪ್ಪ. ಗೋಗಿ ಅವರು ಪತ್ರಿಕೆಯಲ್ಲಿ ತಿಳಿಸಿದ್ದಾರೆ.